ಮನೆ ಕಳ್ಳತನ ತಡೆಗೆ ಧಾರವಾಡ ಜಿಲ್ಲೆಯಲ್ಲಿ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಜಾರಿ
ಧಾರವಾಡ, 15 ಮೇ (ಹಿ.ಸ.) : ಆ್ಯಂಕರ್ : ರಾತ್ರಿ ವೇಳೆ ನಡೆಯುವ ಮನೆ ಕಳ್ಳತನ ಹಾಗೂ ಸ್ವತ್ತಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಎಂಬ ವಿನೂತನ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ವ್ಯವಸ್ಥೆಯನ್ನು ಕಲಘಟಗಿ, ಅಳ್ನಾವರ,
Sp dwd


ಧಾರವಾಡ, 15 ಮೇ (ಹಿ.ಸ.) :

ಆ್ಯಂಕರ್ : ರಾತ್ರಿ ವೇಳೆ ನಡೆಯುವ ಮನೆ ಕಳ್ಳತನ ಹಾಗೂ ಸ್ವತ್ತಿನ ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ ‘ಲಾಕ್ಡ್ ಹೌಸ್ ಬೀಟ್ ಸಿಸ್ಟಮ್’ ಎಂಬ ವಿನೂತನ ವ್ಯವಸ್ಥೆಯನ್ನು ಜಾರಿಗೆ ತಂದಿದೆ.

ಈ ವ್ಯವಸ್ಥೆಯನ್ನು ಕಲಘಟಗಿ, ಅಳ್ನಾವರ, ಕುಂದಗೋಳ ಪಟ್ಟಣ ಪಂಚಾಯತ್ ಹಾಗೂ ಅಣ್ಣಿಗೇರಿ ಮತ್ತು ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಬಿತ್ತಿಪತ್ರ ಬಿಡುಗಡೆ ಮಾಡಿ ಯೋಜನೆ ಕುರಿತು ಮಾಹಿತಿ ನೀಡಿದರು.

ಪ್ರವಾಸ, ಮದುವೆ, ದೇವಸ್ಥಾನ, ಜಾತ್ರೆ ಸೇರಿದಂತೆ ವಿವಿಧ ಕಾರಣಗಳಿಗೆ ಮನೆ ಬಿಟ್ಟು ಹೊರ ಊರುಗಳಿಗೆ ತೆರಳುವ ಸಾರ್ವಜನಿಕರು ಈ ವ್ಯವಸ್ಥೆಯನ್ನು ಬಳಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಮನೆಗೆ ಬೀಗ ಹಾಕಿ ತೆರಳುವ ಸಂದರ್ಭದಲ್ಲಿ ತಮ್ಮ ಹೆಸರು, ವಿಳಾಸ, ಸಂಪರ್ಕ ಸಂಖ್ಯೆ ಹಾಗೂ ಗೂಗಲ್ ಲೊಕೇಶನ್ ಮಾಹಿತಿಯನ್ನು ಪೊಲೀಸ್ ಕಂಟ್ರೋಲ್ ರೂಮ್ ಸಹಾಯವಾಣಿ ಸಂಖ್ಯೆ 8277968343 ಗೆ ಸಂದೇಶ ಅಥವಾ ವಾಟ್ಸಪ್ ಮೂಲಕ ಕಳುಹಿಸಿದರೆ, ಪೊಲೀಸರು ಮನೆಗಳ ಮೇಲ್ವಿಚಾರಣೆ ನಡೆಸಿ ಕಳ್ಳತನ ಪ್ರಕರಣಗಳನ್ನು ತಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande