ಯಡೋಣಿ ಮಹರ್ಷಿ ವಾಲ್ಮೀಕಿ ಆದಿವಾಸಿ ವಸತಿ ಶಾಲೆ - ಅರ್ಜಿ ಆಹ್ವಾನ
ಯಲಬುರ್ಗಾ, 15 ಮೇ (ಹಿ.ಸ.) : ಆ್ಯಂಕರ್ : ಯಲಬುರ್ಗಾ ತಾಲೂಕಿನ ಯಡೋಣಿಯಲ್ಲಿರುವ ಪರಿಶಿಷ್ಟ ವರ್ಗಗಳ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲ
ಯಡೋಣಿ ಮಹರ್ಷಿ ವಾಲ್ಮೀಕಿ ಆದಿವಾಸಿ ವಸತಿ ಶಾಲೆ - ಅರ್ಜಿ ಆಹ್ವಾನ


ಯಲಬುರ್ಗಾ, 15 ಮೇ (ಹಿ.ಸ.) :

ಆ್ಯಂಕರ್ : ಯಲಬುರ್ಗಾ ತಾಲೂಕಿನ ಯಡೋಣಿಯಲ್ಲಿರುವ ಪರಿಶಿಷ್ಟ ವರ್ಗಗಳ ಸಮಾಜ ಕಲ್ಯಾಣ ಇಲಾಖೆಯ ಅಧೀನದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ 1ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪೋಷಕರು ಹಾಗೂ ವಿದ್ಯಾರ್ಥಿಗಳು ಯಲಬುರ್ಗಾದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಯಡೋಣಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ (ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಗುನ್ನಾಳ) ಯಲ್ಲಿ ಅರ್ಜಿ ನಮೂನೆಗಳನ್ನು ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್ನ ದೃಢೀಕರಿಸಿದ ಜೆರಾಕ್ಸ್ ಪ್ರತಿಗಳು ಹಾಗೂ 4 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು.

ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9686588516 ಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande