ಜೂನ್ 21 ರಂದು ನೀಟ್ ಮರು ಪರೀಕ್ಷೆ
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಅನುಮೋದನೆಯ ಬಳಿಕ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್ಟಿಎ, ನೀಟ್ ಮರುಪರೀಕ್ಷೆಯನ್ನು ಜೂನ್ 21 ರಂದು ನಡೆಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಈ ಕುರಿತು ಮಾಹಿತಿ ನೀಡಿರುವ ಎನ್ಟಿಎ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪಪ್ರಚಾರಗಳಿಗೆ ಮರುಳ
Sample photo


ನವದೆಹಲಿ, 15 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಅನುಮೋದನೆಯ ಬಳಿಕ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಎನ್ಟಿಎ, ನೀಟ್ ಮರುಪರೀಕ್ಷೆಯನ್ನು ಜೂನ್ 21 ರಂದು ನಡೆಸುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಎನ್ಟಿಎ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪಪ್ರಚಾರಗಳಿಗೆ ಮರುಳಾಗದೆ ಸಂಸ್ಥೆಯ ಅಧಿಕೃತ ಮಾಹಿತಿ ಮೂಲಗಳನ್ನು ಮಾತ್ರ ಅಭ್ಯರ್ಥಿಗಳು ಹಾಗೂ ಪೋಷಕರು ಅವಲಂಬಿಸುವಂತೆ ಮನವಿ ಮಾಡಿದೆ.

ಯಾವುದೇ ಮಾಹಿತಿ ಅಥವಾ ನೆರವಿಗಾಗಿ ಅಭ್ಯರ್ಥಿಗಳು neet-ug@nta.ac.in ಇ-ಅಂಚೆ ವಿಳಾಸವನ್ನು ಸಂಪರ್ಕಿಸಬಹುದಾಗಿದೆ. ಜೊತೆಗೆ 011-40759000 ಹಾಗೂ 011-69227700 ಸಹಾಯವಾಣಿ ಸಂಖ್ಯೆಗಳನ್ನೂ ಪ್ರಕಟಿಸಲಾಗಿದೆ.

ಇದಕ್ಕೂ ಮುನ್ನ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವರ ನಿವಾಸದಲ್ಲಿ ನಿನ್ನೆ ತಡರಾತ್ರಿ ಮಹತ್ವದ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಮುಂಬರುವ ಪರೀಕ್ಷೆಯ ಸಿದ್ಧತೆಗಳು, ಭದ್ರತಾ ವ್ಯವಸ್ಥೆಗಳು ಹಾಗೂ ಪರೀಕ್ಷಾ ನಿರ್ವಹಣೆಯ ವಿವಿಧ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಉನ್ನತ ಶಿಕ್ಷಣ ಕಾರ್ಯದರ್ಶಿ, ಶಾಲಾ ಶಿಕ್ಷಣ ಕಾರ್ಯದರ್ಶಿ, ಎನ್ಟಿಎ ಮಹಾನಿರ್ದೇಶಕರು, ಸಿಬಿಎಸ್ಇ ಅಧ್ಯಕ್ಷರು, ಕೇಂದ್ರೀಯ ವಿದ್ಯಾಲಯ ಸಂಘಟನೆಯ ಆಯುಕ್ತರು ಹಾಗೂ ನವೋದಯ ವಿದ್ಯಾಲಯ ಸಮಿತಿಯ ಅಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande