
ಬೀದರ್, 15 ಮೇ (ಹಿ.ಸ.) :
ಆ್ಯಂಕರ್ : ಕೆಕೆಆರ್ಡಿಬಿ ಅನುದಾನದಡಿ ಬೀದರ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ಕೌಟ್ ಅಂಡ್ ಗೈಡ್ಸ್ ಭವನವನ್ನು ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ಶಿಸ್ತು, ನಾಯಕತ್ವ ಗುಣಗಳು ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ನೂತನ ಭವನವು ವಿದ್ಯಾರ್ಥಿಗಳು ಹಾಗೂ ಯುವಕರ ಚಟುವಟಿಕೆಗಳಿಗೆ ಮತ್ತಷ್ಟು ಪ್ರೇರಣೆಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಡಾ. ಬಸವಲಿಂಗ ಪಟ್ಟದೇವರು ದಿವ್ಯ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವರು ಹಾಗೂ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ, ವಿಧಾನ ಪರಿಷತ್ ಸದಸ್ಯ ಮಾರುತಿರಾವ ಮೂಳೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.