ಪೆಟ್ರೋಲ್, ಡೀಸೆಲ್ ದರ ಲೀಟರ್ ಗೆ ₹3 ಏರಿಕೆ
ನವದೆಹಲಿ, 15 ಮೇ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಇಂಧನ ದರಗಳು ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಲೀಟರ್ ಗೆ ತಲಾ ₹3ರಷ್ಟು ಹೆಚ್ಚಿಸಲಾಗಿದೆ. ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಸಾರ್ವಜನಿಕ ವಲಯದ ತೈಲ ಮಾರಾಟ ಕಂಪನಿಗಳು ತಿಳಿಸಿವೆ. ಜೊತೆಗೆ ಸಿಎನ್ಜಿ ಬೆಲೆಯ
File photo


ನವದೆಹಲಿ, 15 ಮೇ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಇಂಧನ ದರಗಳು ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಲೀಟರ್ ಗೆ ತಲಾ ₹3ರಷ್ಟು ಹೆಚ್ಚಿಸಲಾಗಿದೆ. ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ ಎಂದು ಸಾರ್ವಜನಿಕ ವಲಯದ ತೈಲ ಮಾರಾಟ ಕಂಪನಿಗಳು ತಿಳಿಸಿವೆ. ಜೊತೆಗೆ ಸಿಎನ್ಜಿ ಬೆಲೆಯನ್ನೂ ಪ್ರತಿ ಕಿಲೋಗ್ರಾಂಗೆ ₹2ರಷ್ಟು ಹೆಚ್ಚಿಸಲಾಗಿದೆ.

ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಹಿನ್ನೆಲೆ ಹಾಗೂ ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಏರಿಕೆಯ ಪರಿಣಾಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು ನಾಲ್ಕು ವರ್ಷಗಳ ನಂತರ ದೇಶದಲ್ಲಿ ಇಂಧನ ದರಗಳಲ್ಲಿ ಇಂತಹ ಮಹತ್ವದ ಏರಿಕೆ ದಾಖಲಾಗಿರುವುದು ಗಮನಾರ್ಹವಾಗಿದೆ.

ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ₹94.77ರಿಂದ ₹97.77ಕ್ಕೆ ಹಾಗೂ ಡೀಸೆಲ್ ಬೆಲೆ ₹87.67ರಿಂದ ₹90.67ಕ್ಕೆ ಏರಿಕೆಯಾಗಿದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈ ಸೇರಿದಂತೆ ಪ್ರಮುಖ ಮಹಾನಗರಗಳಲ್ಲಿಯೂ ದರ ಏರಿಕೆ ಕಂಡುಬಂದಿದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹108.74, ಮುಂಬೈನಲ್ಲಿ ₹106.68 ಹಾಗೂ ಚೆನ್ನೈನಲ್ಲಿ ₹103.67ಕ್ಕೆ ತಲುಪಿದೆ. ಡೀಸೆಲ್ ದರವೂ ಎಲ್ಲಾ ಮಹಾನಗರಗಳಲ್ಲಿ ಸುಮಾರು ₹3ರಷ್ಟು ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ದರ ಏರಿಕೆಗೆ ಸಂಬಂಧಿಸಿ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆಗಳನ್ನು ಮುಂದುವರೆಸಿವೆ. ಕೆಲವು ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಈ ಏರಿಕೆಯನ್ನು ಹಣದುಬ್ಬರದ ಹೊಡೆತ ಎಂದು ಬಣ್ಣಿಸಿದ್ದಾರೆ.

ತಜ್ಞರ ಪ್ರಕಾರ, ಜಾಗತಿಕ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ ಸುಮಾರು $106ಕ್ಕೆ ಏರಿಕೆಯಾದ ಹಿನ್ನೆಲೆ, ತೈಲ ಕಂಪನಿಗಳು ಎದುರಿಸುತ್ತಿದ್ದ ನಷ್ಟವನ್ನು ಸಮತೋಲನಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande