ಶುದ್ಧ ಕುಡಿಯುವ ನೀರು ಪೂರೈಸಿ, ಕೃಷಿಗೆ ಸಾರ್ವಜನಿಕ ನೀರು ಬಳಸಬೇಡಿ : ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
ದಾವಣಗೆರೆ, 15 ಮೇ (ಹಿ.ಸ.)b: ಆ್ಯಂಕರ್ : ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ರೈತರು ಸಾರ್ವಜನಿಕ ಕುಡಿಯುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಬಾರದು ಎಂದು ದಾವಣಗೆರೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಶುದ್ಧ ಕುಡಿಯುವ ನೀರು ಪೂರೈಸಿ, ಕೃಷಿಗೆ ಸಾರ್ವಜನಿಕ ನೀರು ಬಳಸಬೇಡಿ : ಸಿಇಒ ಗಿತ್ತೆ ಮಾಧವ ವಿಠ್ಠಲರಾವ್


ದಾವಣಗೆರೆ, 15 ಮೇ (ಹಿ.ಸ.)b:

ಆ್ಯಂಕರ್ : ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ರೈತರು ಸಾರ್ವಜನಿಕ ಕುಡಿಯುವ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸಬಾರದು ಎಂದು ದಾವಣಗೆರೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಸೂಚಿಸಿದರು.

“ಬೆಳಗಿನ ನಡೆ – ಗ್ರಾಮಗಳ ಕಡೆ” ಕಾರ್ಯಕ್ರಮದ ಅಂಗವಾಗಿ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅವರು ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ಸ್ಥಿತಿಯನ್ನು ಪರಿಶೀಲಿಸಿದರು.

ಹರಿಹರ ತಾಲ್ಲೂಕಿನ ಬಾನುವಳ್ಳಿ, ಹೊನ್ನಾಳಿ ತಾಲ್ಲೂಕಿನ ಕೂಲಂಬಿ, ಅರೆಹಳ್ಳಿ ಗ್ರಾಮದ ನ್ಯಾಮತಿ, ಚನ್ನಗಿರಿ ತಾಲ್ಲೂಕಿನ ತಾವರಕೆರೆ ಹಾಗೂ ಸಂತೆಬೆನ್ನೂರು ಬಹು ಗ್ರಾಮ ಕುಡಿಯುವ ನೀರಿನ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟಕಗಳಲ್ಲಿ ಮರಳು ಬದಲಾವಣೆ, ಸುಣ್ಣ ಬಣ್ಣ ಬಳಿದು ನಿರ್ವಹಣೆ, ಶುದ್ಧೀಕರಿಸಿದ ನೀರಿನ ಪರೀಕ್ಷೆ ಹಾಗೂ ಯಂತ್ರೋಪಕರಣಗಳ ಸಮರ್ಪಕ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೆಂಗಟ್ಟೆ ಬಹು ಗ್ರಾಮ ಕುಡಿಯುವ ನೀರಿನ ಘಟಕ ಹಾಗೂ ನಂದಿಗಾವಿ ಗ್ರಾಮದ ದುಸ್ಥಿತಿಯಲ್ಲಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ತಕ್ಷಣ ದುರಸ್ತಿ ಮಾಡಿ ಸಾರ್ವಜನಿಕರಿಗೆ ನಿರಂತರ ನೀರು ಪೂರೈಕೆ ಕಲ್ಪಿಸುವಂತೆ ಸೂಚಿಸಿದರು.

ಈ ವೇಳೆ ಚನ್ನಗಿರಿ ತಾಲ್ಲೂಕಿನ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯಕ್ಕೂ ಭೇಟಿ ನೀಡಿ ಪರೀಕ್ಷಾ ಪ್ರಕ್ರಿಯೆಗಳ ಕುರಿತು ಮಾಹಿತಿ ಪಡೆದು ನೀರಿನ ಮಾದರಿಗಳನ್ನು ಪರಿಶೀಲಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande