ಮುನಿರಾಬಾದ್ : ಟ್ರ್ಯಾಕ್ಟರ್ ಪಲ್ಟಿ - ಆರು ಜನರ ಸಾವು
ಮುನಿರಾಬಾದ್, 15 ಮೇ (ಹಿ.ಸ.) : ಆ್ಯಂಕರ್ : ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಯ ಕಾರಣ ಮುನಿರಾಬಾದ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಹಳಕ್ಕೆ ಬಿದ್ದ ಕಾರಣ ಟ್ರ್ಯಾಕ್ಟರ್ನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದ
ಮುನಿರಾಬಾದ್ : ಟ್ರ್ಯಾಕ್ಟರ್ ಪಲ್ಟಿ - ಆರು ಜನರ ಸಾವು


ಮುನಿರಾಬಾದ್, 15 ಮೇ (ಹಿ.ಸ.) :

ಆ್ಯಂಕರ್ : ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಯ ಕಾರಣ ಮುನಿರಾಬಾದ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಹಳಕ್ಕೆ ಬಿದ್ದ ಕಾರಣ ಟ್ರ್ಯಾಕ್ಟರ್ನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಮೃತರು ಸಂಡೂರು ತಾಲೂಕಿನ ಯಶವಂತನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಮೃತರ ವಿವರಗಳು ಕೆಂಚಪ್ಪ (35), ಮಹಾಂತೇಶ್ (18), ಭರತ್ (01), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಎಂದು ಪೊಲೀಸರು ತಿಳಿಸಿದ್ದಾರೆ.

ಟ್ರ್ಯಾಕ್ಟರ್ನ ಚಾಲಕನು ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಕಾರಣ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಕಾರಣ ಟ್ರ್ಯಾಕ್ಟರ್ನಲ್ಲಿದ್ದ ಹಲವರ ಪೈಕೆ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಗೆ ಅಗತ್ಯ ಏರ್ಪಾಟುಗಳನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರ್ಘಟನೆಯ ಬಳಿಕ ಹೊಸಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರದ ಎದುರು ಮನಕಲಕುವ ದೃಶ್ಯಗಳು ಕಂಡುಬಂದವು. ಹೆಂಡತಿ ಹಾಗೂ ಮಗನನ್ನು ಕಳೆದುಕೊಂಡು ಗಂಡ ಮಲ್ಲೇಶ್ ಮತ್ತು ಮಗ ಶೋಕದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಂಡು ಆಕ್ರಂದನ ಮಾಡುತ್ತಿರುವ ದೃಶ್ಯ ಅಲ್ಲಿದ್ದವರ ಕಣ್ಣೀರಾಗುವಂತೆ ಮಾಡಿತು.

ಕೊಪ್ಪಳ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಎಲ್. ಅರಸಿದ್ದಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande