
ಬಳ್ಳಾರಿ, 16 ಮೇ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರ ಸಾರಿಗೆ ಸಂಬಂಧಿತ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಮೇ 21 ರಂದು ಬೆಳಿಗ್ಗೆ 11.30 ಗಂಟೆಗೆ ‘ಸಾರಿಗೆ ಅದಾಲತ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳು ಹಾಗೂ ಸಮಸ್ಯೆಗಳ ಕುರಿತು ಅರ್ಜಿಗಳ ಮುಖಾಂತರ ದೂರನ್ನು ಸಲ್ಲಿಸಬಹುದಾಗಿದೆ.
ಸಲ್ಲಿಕೆಯಾಗುವ ಸಾರ್ವಜನಿಕರ ಕುಂದುಕೊರತೆಗಳನ್ನು ಅಧಿಕಾರಿಗಳು ಪರಿಶೀಲಿಸಿ, ಸ್ಥಳದಲ್ಲೇ ಸೂಕ್ತ ಪರಿಹಾರ ಹಾಗೂ ಇತ್ಯರ್ಥ ಗೊಳಿಸಲಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಸಾರಿಗೆ ಅದಾಲತ್ನ ಪ್ರಯೋಜನವನ್ನು ಪಡೆದುಕೊಂಡು, ಬಾಕಿ ಇರುವ ತಮ್ಮ ವಿವಿಧ ಅರ್ಜಿಗಳನ್ನು ಪೂರ್ಣಗೊಳಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್