ಕುರುಗೋಡು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಕುರುಗೋಡು, 16 ಮೇ (ಹಿ.ಸ.) : ಆ್ಯಂಕರ್ : ಕುರುಗೋಡು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 5 ರಿಂ
ಕುರುಗೋಡು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ


ಕುರುಗೋಡು, 16 ಮೇ (ಹಿ.ಸ.) :

ಆ್ಯಂಕರ್ : ಕುರುಗೋಡು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರಾಗಿರುತ್ತಾರೆ. ಮಂಜೂರಾತಿ ಸಂಖ್ಯಾಬಲದ ಶೇ.75 ರಷ್ಟು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಹಾಗೂ ಇನ್ನುಳಿದ ಶೇ.25 ರಷ್ಟು ಸೀಟುಗಳನ್ನು ಪರಿಶಿಷ್ಟ ಪಂಗಡ ಮತ್ತು ಇತರೆ ಜಾತಿಯ ಅರ್ಹ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ swdhmis.karnataka.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ನಂತರ ಅದರ ಸ್ವೀಕೃತಿ ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಬಳ್ಳಾರಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ರವರಿಗೆ ಸಲ್ಲಿಸಬೇಕಾಗುತ್ತದೆ.

ಬೇಕಾಗುವ ಪ್ರಮುಖ ದಾಖಲೆಗಳು:

ಸ್ಯಾಟ್ಸ್ ಸಂಖ್ಯೆ, ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ವಿದ್ಯಾರ್ಥಿಯ ಭಾವಚಿತ್ರ (ಫೋಟೋ ), ಬ್ಯಾಂಕ್ ಖಾತೆ ವಿವರಗಳು, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ, ತಂದೆ/ತಾಯಿಯ ಆಧಾರ್ ಸಂಖ್ಯೆ.

ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಕೌಲ್ ಬಜಾರ್ 1ನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande