ಬೆಂಗಳೂರು ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಎದುರಿಸಲು ಪೂರ್ವ ಸಿದ್ದತೆ
ಬೆಂಗಳೂರು, 16 ಮೇ (ಹಿ.ಸ.) : ಆ್ಯಂಕರ್ : ಮುಂಬರುವ ಮಳೆಗಾಲವನ್ನು ಎದುರಿಸಲು ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ಪಾಲಿಕೆ ಸಜ್ಜಾಗಿದೆ. ಇದರ ಭಾಗವಾಗಿ ಪಶ್ಚಿಮ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಗೋವಿಂದರಾಜನಗರದಲ್ಲಿರುವ ಬಿ
ಸಿದ್ದತೆ


ಬೆಂಗಳೂರು, 16 ಮೇ (ಹಿ.ಸ.) :

ಆ್ಯಂಕರ್ : ಮುಂಬರುವ ಮಳೆಗಾಲವನ್ನು ಎದುರಿಸಲು ಅಗತ್ಯ ಪೂರ್ವಸಿದ್ಧತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಪಶ್ಚಿಮ ಪಾಲಿಕೆ ಸಜ್ಜಾಗಿದೆ. ಇದರ ಭಾಗವಾಗಿ ಪಶ್ಚಿಮ ಪಾಲಿಕೆ ಆಯುಕ್ತ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಗೋವಿಂದರಾಜನಗರದಲ್ಲಿರುವ ಬಿಜಿಎಸ್ ಮೈದಾನದಲ್ಲಿ ಮಾನ್ಸೂನ್ ಸಿದ್ಧತೆ ಕುರಿತ ಪರಿಶೀಲನಾ ಪರೇಡ್ ನಡೆಸಿದರು.

ಈ ವೇಳೆ ಪಾಲಿಕೆ ವಿವಿಧ ವಿಭಾಗಗಳ ನಿಯಂತ್ರಣ ಕೊಠಡಿ ತಂಡಗಳು, ತುರ್ತು ಪರಿಸ್ಥಿತಿ ನಿರ್ವಹಣಾ ಸಿಬ್ಬಂದಿ ಹಾಗೂ ಕ್ಷೇತ್ರ ಮಟ್ಟದ ಕಾರ್ಯಕರ್ತರ ಸನ್ನದ್ಧತೆಯನ್ನು ಆಯುಕ್ತರು ಸಮಗ್ರವಾಗಿ ಪರಿಶೀಲಿಸಿದರು. ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳಿಗೆ ತ್ವರಿತವಾಗಿ ಸ್ಪಂದಿಸುವ ಉದ್ದೇಶದಿಂದ ವಿವಿಧ ತುರ್ತು ಉಪಕರಣಗಳ ಕಾರ್ಯಕ್ಷಮತೆಯನ್ನೂ ಪರಿಶೀಲಿಸಲಾಯಿತು.

ಪರಿಶೀಲನೆ ವೇಳೆ ಹೂಳು ತೆರವು ಯಂತ್ರಗಳು, ಟ್ರ್ಯಾಕ್ಟರ್ ಘಟಕಗಳು, ಮರ ಕಡಿಯುವ ಯಂತ್ರಗಳು, ನಿರ್ಜಲೀಕರಣ ಪಂಪ್ಗಳು ಹಾಗೂ ತುರ್ತು ಪ್ರತಿಕ್ರಿಯೆ ಯಂತ್ರೋಪಕರಣಗಳನ್ನು ಪ್ರದರ್ಶಿಸಲಾಯಿತು. ಮಳೆ ನೀರು ನಿಂತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ನಂತರ ಅಧಿಕಾರಿಗಳು ಮತ್ತು ಕ್ಷೇತ್ರ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಆಯುಕ್ತರು, ಮಳೆಗಾಲದ ಅವಧಿಯಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಯಾವುದೇ ಅಪಘಾತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.

ಅಂತರ-ಇಲಾಖಾ ಸಮನ್ವಯ ಕಾಪಾಡಿಕೊಳ್ಳುವುದು, ನಾಗರಿಕ ರಕ್ಷಣಾ ತಂಡಗಳನ್ನು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವುದು, ಸಾರ್ವಜನಿಕರ ಸಹಭಾಗಿತ್ವದೊಂದಿಗೆ ವಿಪತ್ತು ನಿರ್ವಹಣೆಯನ್ನು ಬಲಪಡಿಸುವುದು ಹಾಗೂ ತುರ್ತು ಪರಿಸ್ಥಿತಿಗಳಿಗೆ ಸದಾ ಸಿದ್ಧವಾಗಿರುವಂತೆ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಮಳೆಗಾಲದಲ್ಲಿ ನಾಗರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳು, ಮಾರ್ಷಲ್ಗಳು, ಏಜೆನ್ಸಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಲಾಗಿದ್ದು, ಪೂರ್ವಭಾವಿ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಆಯುಕ್ತರು ನಿರ್ದೇಶಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande