ಸಿಕ್ಕಿಂ ರಾಜ್ಯೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ
ನವದೆಹಲಿ, 16 ಮೇ (ಹಿ.ಸ.) : ಆ್ಯಂಕರ್ : ಸಿಕ್ಕಿಂ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ರಾಷ್ಟ್ರಪತಿಗಳು, “ತನ್ನ ಅದ್ಭುತ ನೈಸರ್ಗಿಕ ಸೌಂದರ್ಯ, ಶ್ರೀಮಂತ ಸಾಂಸ್ಕೃತಿ
President


ನವದೆಹಲಿ, 16 ಮೇ (ಹಿ.ಸ.) :

ಆ್ಯಂಕರ್ : ಸಿಕ್ಕಿಂ ರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡಿರುವ ರಾಷ್ಟ್ರಪತಿಗಳು, “ತನ್ನ ಅದ್ಭುತ ನೈಸರ್ಗಿಕ ಸೌಂದರ್ಯ, ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹಾಗೂ ಪರಿಸರ ಸಂರಕ್ಷಣೆಯ ಬಲವಾದ ಬದ್ಧತೆಯೊಂದಿಗೆ ಸಿಕ್ಕಿಂ ದೇಶಕ್ಕೆ ಸುಸ್ಥಿರ ಅಭಿವೃದ್ಧಿಯ ಮಾದರಿಯಾಗಿ ನಿಂತಿದೆ” ಎಂದು ಪ್ರಶಂಸಿಸಿದ್ದಾರೆ.

ಸಿಕ್ಕಿಂ ಜನರ ಆತಿಥ್ಯ, ಸರಳತೆ ಮತ್ತು ಸಾಮರಸ್ಯದ ಮನೋಭಾವ ದೇಶಕ್ಕೆ ಮಾದರಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಹಾಗೂ ಅಲ್ಲಿನ ಜನರು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ರಾಷ್ಟ್ರಪತಿಗಳು ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande