
ಬೆಂಗಳೂರು, 16 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಮಧ್ಯಾಹ್ನ ವೇಳೆಗೆ ಉಷ್ಣಾಂಶ ಏರಿಕೆಯಾಗಲಿದ್ದು, ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯೂ ಇದೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಹಾಗೂ ಮಳೆಯ ಪರಿಣಾಮ ಕೆಲ ಪ್ರದೇಶಗಳಲ್ಲಿ ತಾಪಮಾನ ಇಳಿಕೆಯಾಗುವ ನಿರೀಕ್ಷೆಯಿದೆ.
ಗುಡುಗು ಮತ್ತು ಸಿಡಿಲಿನ ಸಾಧ್ಯತೆ ಇರುವುದರಿಂದ ರೈತರು, ಮೀನುಗಾರರು ಹಾಗೂ ಹೊರಾಂಗಣ ಕೆಲಸಗಳಲ್ಲಿ ತೊಡಗಿರುವವರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ
ಹಿಂದೂಸ್ತಾನ್ ಸಮಾಚಾರ್ / Rakesh.M.B.