ಎಸ್ಎಸ್ಎಲ್ಸಿ ಪರೀಕ್ಷೆಗಳು-2, ಪ್ರತಿಬಂಧಕಾಜ್ಞೆ ಜಾರಿ
ಗದಗ, 16 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026 ರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು-2 ಪರೀಕ್ಷೆಗಳನ್ನು ಮೇ 18 ರಿಂದ ಮೇ 23 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.45 ಗಂಟೆಯವರೆಗೆ ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು ಪರೀಕ್ಷಾ
ಫೋಟೋ


ಗದಗ, 16 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026 ರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು-2 ಪರೀಕ್ಷೆಗಳನ್ನು ಮೇ 18 ರಿಂದ ಮೇ 23 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.45 ಗಂಟೆಯವರೆಗೆ ನಡೆಸಲಿದೆ. ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವನ್ನಾಗಿ ಘೋಷಿಸಲಾಗಿದೆ. ಮೇ 18 ರಿಂದ 23 ರವರೆಗೆ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚುಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್ , ಫೋಟೋ ಕಾಪಿಯರ್ಗಳನ್ನು ಬಂದ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande