ಹಣ ವರ್ಗಾವಣೆ ಪ್ರಕರಣ ; ಉದ್ಯಮಿ ರಾಬರ್ಟ್ ವಾದ್ರಾಗೆ ಜಾಮೀನು
ನವದೆಹಲಿ, 16 ಮೇ (ಹಿ.ಸ.) : ಆ್ಯಂಕರ್ : ಶಿಕೋಹ್ಪುರ್ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಉದ್ಯಮಿ ರಾಬರ್ಟ್ ವಾದ್ರಾ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಬಳಿ ಮುಚ್ಚಿಡಲು ಏನೂ ಇಲ್ಲ ಎಂದು ಅವರು ಹೇಳಿದ್ದಾರೆ.
Vadra


ನವದೆಹಲಿ, 16 ಮೇ (ಹಿ.ಸ.) :

ಆ್ಯಂಕರ್ : ಶಿಕೋಹ್ಪುರ್ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಉದ್ಯಮಿ ರಾಬರ್ಟ್ ವಾದ್ರಾ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಬಳಿ ಮುಚ್ಚಿಡಲು ಏನೂ ಇಲ್ಲ ಎಂದು ಅವರು ಹೇಳಿದ್ದಾರೆ.

ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದಿಂದ ಜಾಮೀನು ದೊರೆತ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಾದ್ರಾ, ಜಾರಿ ನಿರ್ದೇಶನಾಲಯ ಸರ್ಕಾರದ ನಿರ್ದೇಶನದ ಮೇರೆಗೆ ತಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ ಎಂದು ಆರೋಪಿಸಿದರು.

“ಇದು ನ್ಯಾಯೋಚಿತವಲ್ಲ. ನಾನು ಯಾವಾಗಲೂ ಇಲ್ಲಿಯೇ ಇರುತ್ತೇನೆ. ಅಗತ್ಯವಿದ್ದಾಗ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ,” ಎಂದು ಹೇಳಿದರು.

ಇದೇ ವೇಳೆ, ಶಿಕೋಹ್ಪುರ್ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಶೇಷ ನ್ಯಾಯಾಧೀಶ ಸುಶಾಂತ್ ಚಾಂಗೋತ್ರಾ ಅವರು ರಾಬರ್ಟ್ ವಾದ್ರಾಗೆ ಜಾಮೀನು ಮಂಜೂರು ಮಾಡಿದರು. 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬರ ಜಾಮೀನಿನ ಮೇರೆಗೆ ಅವರಿಗೆ ಜಾಮೀನು ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande