ಕುದುರೆಮುಖ ಪುನರ್ವಸತಿ ಯೋಜನೆಗೆ ಹೆಚ್ಚುವರಿ ₹20 ಕೋಟಿ : ಈಶ್ವರ ಖಂಡ್ರೆ
ಮಂಗಳೂರು, 17 ಮೇ (ಹಿ.ಸ.) : ಆ್ಯಂಕರ್ : ಕುದುರೆಮುಖ ಅರಣ್ಯ ಪ್ರದೇಶದಿಂದ ಸ್ವಯಂ ಪ್ರೇರಿತರಾಗಿ ಸ್ಥಳಾಂತರಗೊಳ್ಳಲು ಮುಂದಾದ ಐದು ಕುಟುಂಬಗಳಿಗೆ ಒಟ್ಟು ₹2.38 ಕೋಟಿ ಪರಿಹಾರದ ಚೆಕ್ಗಳನ್ನು ವಿತರಿಸಲಾಗಿದ್ದು, ಕುದುರೆಮುಖ ಪುನರ್ವಸತಿ ಯೋಜನೆಗೆ ಹೆಚ್ಚುವರಿಯಾಗಿ ₹20 ಕೋಟಿ ಅನುದಾನ ಮೀಸಲಿರಿಸಲಾಗಿದೆ ಎಂದ
ಖಂಡ್ರೆ


ಮಂಗಳೂರು, 17 ಮೇ (ಹಿ.ಸ.) :

ಆ್ಯಂಕರ್ : ಕುದುರೆಮುಖ ಅರಣ್ಯ ಪ್ರದೇಶದಿಂದ ಸ್ವಯಂ ಪ್ರೇರಿತರಾಗಿ ಸ್ಥಳಾಂತರಗೊಳ್ಳಲು ಮುಂದಾದ ಐದು ಕುಟುಂಬಗಳಿಗೆ ಒಟ್ಟು ₹2.38 ಕೋಟಿ ಪರಿಹಾರದ ಚೆಕ್ಗಳನ್ನು ವಿತರಿಸಲಾಗಿದ್ದು, ಕುದುರೆಮುಖ ಪುನರ್ವಸತಿ ಯೋಜನೆಗೆ ಹೆಚ್ಚುವರಿಯಾಗಿ ₹20 ಕೋಟಿ ಅನುದಾನ ಮೀಸಲಿರಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಆಯೋಜಿಸಲಾದ ಗೇರು ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯೊಂದಿಗೆ ಮಾನವೀಯತೆಗೂ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ಅರಣ್ಯದೊಳಗೆ ವಾಸಿಸುವ ಕುಟುಂಬಗಳಿಗೆ ಸುರಕ್ಷಿತ ಪುನರ್ವಸತಿ ಕಲ್ಪಿಸುವ ಕಾರ್ಯವನ್ನು ಹಂತ ಹಂತವಾಗಿ ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಮಾನವ–ಆನೆ ಸಂಘರ್ಷ ತಡೆ, ಅರಣ್ಯ ಸಂಪತ್ತಿನ ರಕ್ಷಣೆ ಹಾಗೂ ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಕುದುರೆಮುಖ ಪ್ರದೇಶದಲ್ಲಿ ಸ್ವಯಂ ಪ್ರೇರಿತ ಪುನರ್ವಸತಿಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಇದರಿಂದ ಅರಣ್ಯ ಸಂರಕ್ಷಣೆಗೆ ಸಹಕಾರ ದೊರೆಯಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಗೇರು ಮೇಳಕ್ಕೆ ಚಾಲನೆ ನೀಡಿದ ಸಚಿವರು, ಗುಣಮಟ್ಟದ ಕಸಿ ಗೋಡಂಬಿ ಸಸಿಗಳ ಬೆಳವಣಿಗೆಗೆ ₹1 ಕೋಟಿ ಅನುದಾನ ಘೋಷಿಸಿದರು. ರಾಜ್ಯದಲ್ಲಿ ಗೇರು ಬೆಳೆ ಉತ್ತೇಜನಕ್ಕೆ ವಿಶೇಷ ಒತ್ತು ನೀಡಲಾಗುತ್ತಿದ್ದು, ರೈತರಿಗೆ ಉತ್ತಮ ಸಸಿಗಳು, ತಾಂತ್ರಿಕ ಮಾಹಿತಿ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಅವಕಾಶಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕವನ್ನು ಗೇರು ಉತ್ಪಾದನೆಯಲ್ಲಿ ಸ್ವಾವಲಂಬಿ ರಾಜ್ಯವನ್ನಾಗಿಸುವ ಗುರಿಯೊಂದಿಗೆ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ರೈತರ ಆದಾಯ ವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಪಶ್ಚಿಮ ಘಟ್ಟಗಳ ಸಂರಕ್ಷಣೆ, ಹಸಿರು ಹೊದಿಕೆ ವೃದ್ಧಿ ಹಾಗೂ ಪರಿಸರ ಸಮತೋಲನ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.

-

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande