ತಾಂತ್ರಿಕ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ, 17 ಮೇ (ಹಿ.ಸ.) : ಆ್ಯಂಕರ್ : ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ ಇವರ ಆಶ್ರಯದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿರುವ ಆರ್ಮಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಐಟಿ) ವಿದ್ಯಾಸಂಸ್ಥೆಯಲ್ಲಿ 2026-27ನೇ ಸಾಲಿನ ತಾಂತ್ರಿಕ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗಕ್ಕಾಗಿ ಮಾಜಿ ಸೈನಿಕರ
ತಾಂತ್ರಿಕ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಅರ್ಜಿ ಆಹ್ವಾನ


ಶಿವಮೊಗ್ಗ, 17 ಮೇ (ಹಿ.ಸ.) :

ಆ್ಯಂಕರ್ : ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ ಇವರ ಆಶ್ರಯದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿರುವ ಆರ್ಮಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಐಟಿ) ವಿದ್ಯಾಸಂಸ್ಥೆಯಲ್ಲಿ 2026-27ನೇ ಸಾಲಿನ ತಾಂತ್ರಿಕ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗಕ್ಕಾಗಿ ಮಾಜಿ ಸೈನಿಕರ ಅವಲಂಬಿತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಡೇಟಾ ಸೈನ್ಸ್ ಕಂಪ್ಯೂಟರ್ ಇಂಜಿನಿಯರಿಂಗ್,

ಸ್ನಾತಕೋತ್ತರ ವಿ.ಎಲ್.ಎಸ್.ಐ ಮತ್ತು ಎಂಬೆಡ್ಡೆಡ್ (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಶನ್), ಕಂಪ್ಯೂಟರ್ ಇಂಜಿನಿಯರಿಂಗ್ನ ಪಿಎಚ್.ಡಿ ಕೋರ್ಸ್ಗಳಿಗೆ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ11 ರೊಳಗಾಗಿ ಸಂಸ್ಥೆಯ ಅಧಿಕೃತ ಆನ್ಲೈನ್ ಜಾಲತಾಣವಾದ aitpune.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇದೇ ವೆಬ್ಸೈಟ್ ಅನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ(ಪ್ರಭಾರ) ಡಾ.ಸಿ.ಎ.ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande