ಅಲ್ಪಸಂಖ್ಯಾತರ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ
ಕೊಪ್ಪಳ, 17 ಮೇ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗಾಗಿ ಜಿಲ್ಲೆಯ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರ ಸೂಚನೆಯಂತೆ ವಿಜ್
ಅಲ್ಪಸಂಖ್ಯಾತರ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ


ಕೊಪ್ಪಳ, 17 ಮೇ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗಾಗಿ ಜಿಲ್ಲೆಯ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರ ಸೂಚನೆಯಂತೆ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿಗೆ ತಲಾ 60 ವಿದ್ಯಾರ್ಥಿನಿಯರಂತೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಆಸಕ್ತ ವಿದ್ಯಾರ್ಥಿನಿಯರು ಹಾಗೂ ಪೋಷಕರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಸಮೀಪದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನಾಂಕವಾಗಿದ್ದು, ಅಲ್ಪಸಂಖ್ಯಾತರ ವಸತಿ ಕಾಲೇಜುಗಳಲ್ಲಿ 75 ಶೇಕಡಾ ಸ್ಥಾನಗಳನ್ನು ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿನಿಯರಿಗೆ ಹಾಗೂ 25 ಶೇಕಡಾ ಸ್ಥಾನಗಳನ್ನು ಇತರೆ ವರ್ಗದವರಿಗೆ ಮೀಸಲಿರಿಸಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಸರ್ಕಾರ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 10ನೇ ತರಗತಿ ಉತ್ತೀರ್ಣರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ನೀಡಲಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿನಿಯ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ.

ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಹಾಗೂ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ತಾಲ್ಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಕಛೇರಿಗಳಿಂದಲೆ ಪಡೆದುಕೊಳ್ಳಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande