ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸದಸ್ಯರ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
ಭದ್ರಾವತಿ, 17 ಮೇ (ಹಿ.ಸ.) : ಆ್ಯಂಕರ್ : ಭದ್ರಾವತಿ ತಾಲೂಕು ಕೇಂದ್ರದಲ್ಲಿರುವ ಡಾ|| ಬಿ.ಆರ. ಅಂಬೇಡ್ಕರ್ ಸಮುದಾಯ ಭವನದ ನಿರ್ವಹಣೆ ಮಾಡಲು 2 ವರ್ಷಗಳ ಅವಧಿಗೆ ನಿರ್ವಹಣಾ ಸಮಿತಿಯನ್ನು ರಚಿಸಬೇಕಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ 3 ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ
ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸದಸ್ಯರ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ


ಭದ್ರಾವತಿ, 17 ಮೇ (ಹಿ.ಸ.) :

ಆ್ಯಂಕರ್ : ಭದ್ರಾವತಿ ತಾಲೂಕು ಕೇಂದ್ರದಲ್ಲಿರುವ ಡಾ|| ಬಿ.ಆರ. ಅಂಬೇಡ್ಕರ್ ಸಮುದಾಯ ಭವನದ ನಿರ್ವಹಣೆ ಮಾಡಲು 2 ವರ್ಷಗಳ ಅವಧಿಗೆ ನಿರ್ವಹಣಾ ಸಮಿತಿಯನ್ನು ರಚಿಸಬೇಕಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ 3 ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.

ಭದ್ರಾವತಿ ತಾಲೂಕಿನಲ್ಲಿ ವಾಸಿಸುತ್ತಿರುವ ಹಾಗೂ ಬೇರೆ ಯಾವುದೇ ಸಮಿತಿಗಳಲ್ಲಿ ನೇಮಕಗೊಳ್ಳದಿರುವ ಪರಿಶಿಷ್ಟ ಜಾತಿಯ ಆಸಕ್ತರು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ಹಿಂಭಾಗ, ಭದ್ರಾವತಿ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಣ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡ್ ನ್ನು ಲಗತ್ತಿಸಿ ಮೇ 21 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08282-263761 ನ್ನು ಸಂಪರ್ಕಿಸುವುದು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande