ಕೋಲಾರ ಜಿಲ್ಲಾ ಕಾಂಗ್ರೆಸ್ ಆಟೋ ಘಟಕದ ಅಧ್ಯಕ್ಷರಾಗಿ ಡಿ. ಕೇಶವ ನೇಮಕ
ಕೋಲಾರ ಜಿಲ್ಲಾ ಕಾಂಗ್ರೆಸ್ ಆಟೋ ಘಟಕದ ಅಧ್ಯಕ್ಷರಾಗಿ ಡಿ. ಕೇಶವ ನೇಮಕ
ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಟೋ ಘಟಕದ ಅಧ್ಯಕ್ಷರನ್ನಾಗಿ ಡಿ.ಕೇಶವ ನೇಮಕ ಆಗಿದ್ದಾರೆ.


ಕೋಲಾರ, ೧೭ ಮೇ (ಹಿ.ಸ) :

ಆ್ಯಂಕರ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ತಳಮಟ್ಟಕ್ಕೆ ತಲುಪಿಸುವ ಹಾಗೂ ಕಾರ್ಮಿಕರ ಹಿತರಕ್ಷಣೆ ಮಾಡುವ ಉದ್ದೇಶದಿಂದ, ಕೋಲಾರದ ಅಂಬೇಡ್ಕರ್ ನಗರದ ನಿವಾಸಿ ಡಿ. ಕೇಶವ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಟೋ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಡಿ. ಕೇಶವ ಅವರ ಪಕ್ಷ ನಿಷ್ಠೆ, ಸುದೀರ್ಘ ಸಮಾಜ ಸೇವೆ ಹಾಗೂ ಸಂಘಟನಾ ಚಾತುರ್ಯವನ್ನು ಗುರುತಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಈ ಜವಾಬ್ದಾರಿಯನ್ನು ವಹಿಸಿದೆ. ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಸಿ. ಲಕ್ಷ್ಮೀನಾರಾಯಣ ಅವರು, ಮುಂದಿನ ದಿನಗಳಲ್ಲಿ ನೂತನ ಅಧ್ಯಕ್ಷರು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಟೋ ಚಾಲಕರ ಘಟಕಗಳನ್ನು ನೇಮಿಸಿ ಚಾಲಕರ ಮತ್ತು ಕಾರ್ಮಿಕರ ಹಿತರಕ್ಷಣೆಗಾಗಿ ಶ್ರಮಿಸಬೇಕು. ಪಕ್ಷದ ತತ್ವ ಸಿದ್ಧಾಂತಗಳಿಗೆ ಸದಾ ಬದ್ಧರಾಗಿ, ಅತ್ಯಂತ ನಿಷ್ಠೆ, ಪ್ರಾಮಾಣಿಕತೆ ಹಾಗೂ ಜವಾಬ್ದಾರಿಯಿಂದ ಸಂಘಟನೆಯನ್ನು ಬಲಪಡಿಸುವ ಮೂಲಕ ಪಕ್ಷದ ಯಶಸ್ಸಿಗೆ ಕಾರಣಕರ್ತರಾಗಬೇಕು ಎಂದು ತಿಳಿಸಿ, ನೂತನ ಪದಾಧಿಕಾರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಲಕ್ಷ್ಮೀಸಾಗರ ಎಲ್.ಇ. ಕೃಷ್ಣೇಗೌಡ, ಎಸ್.ಸಿ. ಘಟಕದ ಜಿಲ್ಲಾಧ್ಯಕ್ಷರಾದ ಕೆ. ಜಯದೇವ್, ನಗರಸಭಾ ಸದಸ್ಯರಾದ ಎಸ್.ಆರ್. ಮುರಳಿಗೌಡ, ಕುರುಬರಪೇಟೆ ಸೋಮಶೇಖರ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande