ನಾಳೆಯಿಂದ ಭದ್ರಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ
ಶಿವಮೊಗ್ಗ, 17 ಮೇ (ಹಿ.ಸ.) : ಆ್ಯಂಕರ್ : ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುಂಗಭದ್ರಾ ನದಿಯ ನೀರನ್ನು ಅವಲಂಭಿಸಿರುವ ನಗರ ಮತ್ತು ಗ್ರಾಮೀಣ
ನಾಳೆಯಿಂದ ಭದ್ರಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ


ಶಿವಮೊಗ್ಗ, 17 ಮೇ (ಹಿ.ಸ.) :

ಆ್ಯಂಕರ್ : ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಗಾಗಿ ತುಂಗಭದ್ರಾ ನದಿಯ ನೀರನ್ನು ಅವಲಂಭಿಸಿರುವ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ.18 ರಿಂದ 23 ರವರೆಗೆ ಪ್ರತಿದಿನ 2000 ಕ್ಯೂಸೆಕ್ಸ್ ನಂತೆ ನೀರನ್ನು ಹರಿಸಲಾಗುವುದು.

ಆದುದರಿಂದ ನದಿಯ ದಂಡೆಯ ಕೆಳಮಟ್ಟದಲ್ಲಿ ಸಾರ್ವಜನಿಕರು ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಮಾಡುವುದು ಇತ್ಯಾದಿ ಮಾಡಬಾರದೆಂದು ಎಚ್ಚರಿಕೆ ನೀಡಲಾಗಿದೆ. ಮೇಲೆ ತಿಳಿಸಿದ ಅವಧಿಯಲ್ಲಿ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್ಸೆಟ್ಗಳಿಂದ ನೀರೆತ್ತುವುದನ್ನೂ ಸಹ ನಿಷೇಧಿಸಲಾಗಿದೆ ಎಂದು ಬಿ.ಆರ್. ಪ್ರಾಜೆಕ್ಟ್, ಭದ್ರಾ ಜಲಾಶಯ ಯೋಜನೆ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande