ರಾಜ್ಯದಾದ್ಯಂತ ಒಣಹವೆ, ಮಳೆ ಮುನ್ಸೂಚನೆ
ಎಚ್ಚ ರಿ ಕೆಯಿಂದಿರಲು
ಮುನ್ಸೂಚನೆ


ಬೆಂಗಳೂರು, 17 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಉಂಟಾಗುವ ನಿರೀಕ್ಷೆಯಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಭಾಗಗಳಲ್ಲಿಯೂ ಕೆಲವೆಡೆ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

ಬಿಸಿಲಿನ ತಾಪಮಾನ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಹೆಚ್ಚಿನ ಸಮಯ ಹೊರಾಂಗಣದಲ್ಲಿ ಇರುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande