ಕರಾರಸಾ ನಿಗಮದ ಸಿಬ್ಬಂದಿ ಮುಷ್ಕರ ಹಿನ್ನೆಲೆ ಅಧಿಕಾರಿಗಳ ಸಭೆ
ಕರಾರಸಾ ನಿಗಮದ ಸಿಬ್ಬಂದಿ ಮುಷ್ಕರ ಹಿನ್ನೆಲೆ: ಅಧಿಕಾರಿಗಳ ಸಭೆ
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಕೈಗೊಳ್ಳಲಿರುವ ಮುಷ್ಕರದ ಹಿನ್ನಲೆಯಲ್ಲಿ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅಧಿಕಾರಿಗಳ ಸಭೆ ನಡೆಸಿದರು.


ಕೋಲಾರ, ೧೭ ಮೇ (ಹಿ.ಸ) :

ಆ್ಯಂಕರ್ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕರಾರಸಾ) ಸಿಬ್ಬಂದಿಯವರು ಮುಂಬರುವ ಮೇ ೨೦ರ ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಸಾರ್ವಜನಿಕರಿಗೆ ಯಾವುದೇ ರೀತಿಯ ಸಾರಿಗೆ ತೊಂದರೆಯಾಗದAತೆ ಕಟ್ಟುನಿಟ್ಟಿನ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಆರ್. ರವಿ ತಿಳಿಸಿದ್ದಾರೆ.

ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಾರಿಗೆ ವ್ಯವಸ್ಥೆಯ ಸುಗಮ ಕಾರ್ಯಾಚರಣೆ ಕುರಿತ ಉನ್ನತ ಮಟ್ಟದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ತೀವ್ರ ಬೇಸಿಗೆ ಕಾಲವಾಗಿರುವುದರಿಂದ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಹೆಚ್ಚಿನ ಸಾರಿಗೆ ಸೌಕರ್ಯಗಳನ್ನು ಒದಗಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಅದರಲ್ಲೂ ಮುಖ್ಯವಾಗಿ, ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಯ ಯಶಸ್ವಿ ಅನುಷ್ಠಾನದ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೋಲಾರ ವಿಭಾಗದ ಸಾರಿಗೆ ಸಿಬ್ಬಂದಿಗಳು ಮುಷ್ಕರದ ನೆಪದಲ್ಲಿ ತಮ್ಮ ಕರ್ತವ್ಯಗಳಿಗೆ ಗೈರುಹಾಜರಾಗಬಾರದು. ಸಾರ್ವಜನಿಕ ಸೇವೆಯನ್ನು ಆದ್ಯತೆಯಾಗಿ ಪರಿಗಣಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯ ಗ್ರಾಮೀಣ ಭಾಗಗಳ ಜನರಿಗೆ, ಹಳ್ಳಿಗಳ ವ್ಯಾಪ್ತಿಯಿಂದ ಮತ್ತು ವಿವಿಧ ತಾಲೂಕು ಕೇಂದ್ರಗಳಿAದ ಕೋಲಾರ ಜಿಲ್ಲಾ ಕೇಂದ್ರಕ್ಕೆ ಬರುವವರಿಗೆ ಹಾಗೂ ಕೋಲಾರದಿಂದ ಬೆಂಗಳೂರಿಗೆ ಪ್ರಯಾಣಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಈಗಾಗಲೇ ನಿಗಮದ ವತಿಯಿಂದ ಹೆಚ್ಚಿನ ಟ್ರಿಪ್ಗಳನ್ನು ಒದಗಿಸಲಾಗಿದೆ. ಈ ಮಾರ್ಗಗಳಲ್ಲಿ ಬಸ್ಗಳ ಸುಗಮ ಕಾರ್ಯಾಚರಣೆಗೆ ಯಾವುದೇ ಅಡ್ಡಿಯಾಗದಂತೆ ಸಾರಿಗೆ ಸಂಸ್ಥೆಯು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಮುಷ್ಕರದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ಜಿಲ್ಲೆಯ ಎಲ್ಲಾ ತಾಲೂಕು ಬಸ್ ಘಟಕಗಳಿಗೆ (ಡಿಪೋಗಳು) ಮತ್ತು ಪ್ರಮುಖ ಬಸ್ ನಿಲ್ದಾಣಗಳಿಗೆ ಸೂಕ್ತ ಪೊಲೀಸ್ ಭದ್ರತೆ ಹಾಗೂ ಪೂರ್ಣ ಸಹಕಾರ ನೀಡಲು ಸೂಚಿಸಲಾಗಿದೆ. ಇದರೊಂದಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸಹ ಸಾರ್ವಜನಿಕ ಪ್ರಯಾಣಿಕರ ಸುಗಮ ಸಂಚಾರಕ್ಕೆ ಪೂರಕವಾಗಿ ತಮ್ಮ ವ್ಯಾಪ್ತಿಯಲ್ಲಿ ಅಗತ್ಯವಿರುವ ಎಲ್ಲಾ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಅಪರ ಜಿಲ್ಲಾಧಿಕಾರಿ ಎಸ್. ಎಂ. ಮಂಗಳ,ಕರಾರಸಾ ನಿಗಮದ ಕೋಲಾರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿ ವೇಣುಗೋಪಾಲ್, ಕೆಜಿಎಫ್ ಸಹಾಯಕ ಪ್ರಾದೇಶಿಕ ಅಧಿಕಾರಿ, ಉರಿಗಾಂ ಹಾಗೂ ಬಿಇಎಂಎಲ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ಗಳು, ವಿಭಾಗೀಯ ಸಂಚಾರ ಅಧಿಕಾರಿ ಮತ್ತು ವಿಭಾಗೀಯ ಭದ್ರತಾ ಅಧೀಕ್ಷಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande