ಪಡಿತರ ಕಾರ್ಡುಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಅವಕಾಶ
ಗದಗ, 17 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಈ ಕೆಳಕಾಣಿಸಿದ ಅಂಶಗಳಿಗೆ ಮಾತ್ರ ಪಡಿತರ ಕಾರ್ಡುಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮ್ ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿ
ಫೋಟೋ


ಗದಗ, 17 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಈ ಕೆಳಕಾಣಿಸಿದ ಅಂಶಗಳಿಗೆ ಮಾತ್ರ ಪಡಿತರ ಕಾರ್ಡುಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮ್ ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದಿಂದ ಬಂದಿರುವ ಪಟ್ಟಿಯಲ್ಲಿನ ಇ- ಶ್ರಮ ಕಾರ್ಡು ಹೊಂದಿರುವ ಕಾರ್ಮಿಕ ವರ್ಗದವರಿಗೆ ಹೊಸ ಪಡಿತರ ಕಾರ್ಡಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿದೆ. ( ಬೆ 10 ರಿಂದ ಸಂಜೆ 5 ರವರೆಗೆ), ಹೊಸ ಪಡಿತರ ಕಾರ್ಡಗೆ ಅರ್ಜಿ ಸಲ್ಲಿಸಿದ್ದಲ್ಲಿ ಸರ್ಕಾರದಿಂದ ಹೊರಡಿಸಲಾದ ವೈದ್ಯಕೀಯ ಚಿಕಿತ್ಸೆ ಪಟ್ಟಿಯಲ್ಲಿನ ತುರ್ತು ಚಿಕಿತ್ಸೆಗೆ ಮಂಜೂರಾತಿ ನೀಡಲು ಅವಕಾಶ ( ಬೆಳಿಗ್ಗೆ 10 ರೀಂದ ರಾತ್ರಿ 9 ರವರೆಗೆ), ತುರ್ತು ವೈದ್ಯಕೀಯ ಚಿಕಿತ್ಸೆಯಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ ( ಬೆ. 10 ರಿಂದ ಸಂಜೆ 5 ಗಂಟೆಯವರೆಗೆ), ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ ತಿದ್ದುಪಡಿಗೆ ಸಾರ್ವಜನಿಕಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ ( ಬೆ 10 ರಿಂದ ಸಂಜೆ 5 ಗಂಟೆಯವೆಗೆ), ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ ತಿದ್ದುಪಡಿಗೆ ಸಲ್ಲಿಸಿದ ಅರ್ಜಿಗಳನ್ನು ಮಂಜೂರು ಮಾಡಲು ಅಹಾರ ನಿರೀಕ್ಷಕರಿಗೆ ಅವಕಾಶ ಕಲ್ಪಿಸಿದೆ ( ಬೆ 10 ರಿಂದ ರಾತ್ರಿ 9 ಗಂಟೆಯವರೆಗೆ )

ಸಾರ್ವಜನಿಕರು ಈ ಅವಕಾಶದ ಸದುಪಯೋಗಪಡಿಸಿಕೊಳ್ಳಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande