
ಕೊಪ್ಪಳ, 17 ಮೇ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತರನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಕುಡ್ಲಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ಏಳು ಮಂದಿ ದುರ್ಮರಣ ಹೊಂದಿದ್ದು, ಹಲವರು ಗಾಯಗೊಂಡಿದ್ದರು. ಆಸ್ಪತ್ರೆಗೆ ಭೇಟಿ ನೀಡಿದ ಶ್ರೀರಾಮುಲು ಅವರು ಗಾಯಾಳುಗಳಿಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಅದೇ ವೇಳೆ ವೈದ್ಯರೊಂದಿಗೆ ಮಾತುಕತೆ ನಡೆಸಿದ ಅವರು, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರ ಮತ್ತು ಸಮಾಜದಿಂದ ಅಗತ್ಯ ನೆರವು ದೊರೆಯಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ. ಬಸವರಾಜ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗನ್ನವರ್ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.