
ಬಳ್ಳಾರಿ, 17 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ. ಎಲ್ ಅವರು ಬಳ್ಳಾರಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ನಾಳೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಕುಂದುಕೊರತೆಗಳ ಸಭೆ ಮತ್ತು ಅಹವಾಲು ಸ್ವೀಕಾರ ಮಾಡುವರು.
ಬಳಿಕ ಮಧ್ಯಾಹ್ನ 2.15 ಗಂಟೆಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪತ್ರಿಕಾ ಗೋಷ್ಠಿ ನಡೆಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಸಾರ್ವಜನಿಕರಿಗೆ ಮನವಿ : ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಮತ್ತು ಸಾರ್ವಜನಿಕರು ಈ ಕುಂದುಕೊರತೆಗಳ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಸಲ್ಲಿಸಬೇಕು ಎಂದು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್