ಕಾರ್ಯಕರ್ತರು ಪಕ್ಷದ ತತ್ವ ಹಾಗೂ ಸಂಘಟನಾ ಬಲ ಹೆಚ್ಚಿಸಬೇಕು : ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳಗಾವಿ, 17 ಮೇ (ಹಿ.ಸ.) : ಆ್ಯಂಕರ್ : ಬೆಳಗಾವಿಯಲ್ಲಿ ಇಂದು ಆಯೋಜಿಸಲಾಗಿದ್ದ “ಬೆಳಗಾವಿ ಗ್ರಾಮಾಂತರ ಜಿಲ್ಲಾ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ - 2026” ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿ ಬೌದ್ಧಿಕ ಅವಧಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮಾತನಾಡಿ
ಕಾರ್ಯಾಗಾರ


ಬೆಳಗಾವಿ, 17 ಮೇ (ಹಿ.ಸ.) :

ಆ್ಯಂಕರ್ : ಬೆಳಗಾವಿಯಲ್ಲಿ ಇಂದು ಆಯೋಜಿಸಲಾಗಿದ್ದ “ಬೆಳಗಾವಿ ಗ್ರಾಮಾಂತರ ಜಿಲ್ಲಾ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ - 2026” ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿ ಬೌದ್ಧಿಕ ಅವಧಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ತತ್ವ, ಸಂಘಟನೆ ಮತ್ತು ರಾಷ್ಟ್ರಸೇವೆಯ ಧ್ಯೇಯಗಳನ್ನು ಕಾರ್ಯಕರ್ತರು ಜನರಿಗೆ ತಲುಪಿಸುವ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಸಂಘಟಿತ ಕಾರ್ಯಪದ್ಧತಿ ಮತ್ತು ಸಮರ್ಪಿತ ಸೇವಾಭಾವದಿಂದ ಮಾತ್ರ ಪಕ್ಷ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ ಎಂದು ಹೇಳಿದರು.

ಪಂಡಿತ್ ದೀನದಯಾಳ ಉಪಾಧ್ಯಾಯರ ಅಂತ್ಯೋದಯ ತತ್ವದ ಆಧಾರದ ಮೇಲೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ತಲುಪಿಸುವ ಗುರಿಯೊಂದಿಗೆ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳಗಾವಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಪ್ರಮುಖ ನಾಯಕರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande