ನರೇಗಾ ಕೂಲಿಕಾರರು ಕೆಲಸಕ್ಕೆ ಹಾಜರಾಗಿ : ಅಗಳಕೇರಾ ಪಿಡಿಒ
ಕೊಪ್ಪಳ , 18 ಮೇ (ಹಿ.ಸ.) : ಆ್ಯಂಕರ್ : ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಎಲ್ಲಾ ಕೂಲಿಕಾರರು ಫಾರಂ ನಂ.6 ಸಲ್ಲಿಸುವ ಮೂಲಕ ಕೂಲಿ ಕೆಲಸಕ್ಕೆ ಹಾಜರಾಗುವಂತೆ ಅಗಳಕೇರಾ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಬಸವರಾಜ ಬಳಿಗಾರ ಅವರು ಕರೆ ನೀಡಿದರು. ಅಗಳಕೇರಾ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಸೋಮವಾರ ಆಯ
All NREGA workers should report to work: Agala Kera PDO


ಕೊಪ್ಪಳ , 18 ಮೇ (ಹಿ.ಸ.) :

ಆ್ಯಂಕರ್ : ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಎಲ್ಲಾ ಕೂಲಿಕಾರರು ಫಾರಂ ನಂ.6 ಸಲ್ಲಿಸುವ ಮೂಲಕ ಕೂಲಿ ಕೆಲಸಕ್ಕೆ ಹಾಜರಾಗುವಂತೆ ಅಗಳಕೇರಾ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಬಸವರಾಜ ಬಳಿಗಾರ ಅವರು ಕರೆ ನೀಡಿದರು.

ಅಗಳಕೇರಾ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಐಇಸಿ ಕಾರ್ಯಕ್ರಮದಡಿ ರೋಜಗಾರ್ ದಿವಸ್ ಕಾರ್ಯಕ್ರಮದಲ್ಲಿ ಕೂಲಿಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರತಿ ಮಾನವ ದಿನಕ್ಕೆ 370/- ಕೂಲಿ ನಿಗದಿಪಡಿಸಿದ್ದು ಸಂಪೂರ್ಣವಾಗಿ ಕೂಲಿ ಕೆಲಸ ನಿರ್ವಹಿಸಿ ಪೂರ್ತಿ ಹಣ ಪಡೆದುಕೊಳ್ಳಬೇಕು. 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಜಾಬಕಾರ್ಡ ಬಳಕೆ ಮಾಡಿಕೊಂಡು ಕೂಲಿ ಕೆಲಸ ಪಡೆಯಲು ಕಡ್ಡಾಯವಾಗಿ ನಮೂನೆ-6 ಸಲ್ಲಿಸಬೇಕೆಂದರು. ಮೇ ಮತ್ತು ಜೂನ್ ವರೆಗೆ 60 ದಿನಗಳ ಕೂಲಿ ಕೆಲಸ ಪಡೆಯಬೇಕು. ಕೂಲಿ ಹಣದಿಂದ ಮಕ್ಕಳ ಶಾಲಾ, ಕಾಲೇಜು ಶುಲ್ಕ ಭರಿಸಲು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗೆ ಶುಲ್ಕ ಹಾಗೂ ಕುಟುಂಬ ನಿರ್ವಹಣೆಗೆ ಅನುಕೂಲವಾಗುತ್ತದೆ. ಜಾಬಕಾರ್ಡನಲ್ಲಿರುವ ಕುಟುಂಬದ ಎಲ್ಲ ಸದಸ್ಯರು ಇ-ಕೆವೈಸಿ ಹೊಂದಿದ ನಂತರವೇ ಎನ್ಎಂಆರ್ ಪ್ರಕಾರ ಕೂಲಿಕಾರರು ಕೂಲಿ ಕೆಲಸಕ್ಕೆ ಹಾಜರಾಗಬೇಕು. 1 & 2ನೇ ಹಾಜರಾತಿ ಕಡ್ಡಾಯವಾಗಿರುತ್ತದೆ ಎಂದರು.

ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ ಅವರು ಮಾತನಾಡಿ, ಪ್ರತಿ ಜಾಬಕಾರ್ಡಗೆ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತಿದ್ದು ಸದುಪಯೋಗ ಪಡೆಯಬೇಕು. ಗ್ರಾಮೀಣ ಭಾಗದ ಕೂಲಿಕಾರರು ಕೂಲಿ ಅರಸಿ ಗುಳೆ ಹೋಗುವದನ್ನು ನಿಯಂತ್ರಿಸಿ ಸ್ಥಳೀಯವಾಗಿ ಉದ್ಯೋಗ ಒದಗಿಸಿ ಅವರಿಗೆ ಕೂಲಿ ಹಣ ಪಾವತಿಸಿ ಸ್ವಾವಂಬಿ ಜೀವನ ನಡೆಸಲು ಯೋಜನೆಯ ಸದುದ್ದೇಶವಾಗಿದೆ. ಎಲ್ಲಾ ಕೂಲಿಕಾರರು ಸಾಮಾಜಿಕ ಭದ್ರತೆ ವಿಮೆಗಳಾದ ಪಿಎಂಜೆಜೆಬಿವೈ, ಪಿ.ಎಂ.ಎಸ್.ಬಿ.ವೈ.ಗಳಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಕಾಯಕ ಬಂಧುಗಳ ಮೂಲಕ ಒಟ್ಟು 121 ಕೂಲಿಕಾರರ ಫಾರಂ ನಂ.6 ಸ್ವೀಕರಿಸಲಾಯಿತು.

ಗ್ರಾಮ ಪಂಚಾಯತಿ ಕಾರ್ಯದರ್ಶಿ ಅಕ್ಷಯಕುಮಾರ, ಡಿಇಒ ಸುಮನ್, ಬೇರ್ಫೂಟ್ ಟೆಕ್ನಿಷಿಯನ್ ಮೈಲಾರಪ್ಪ, ಕಾಯಕ ಬಂಧುಗಳಾದ ಇಸ್ಯಾಯಿಲ್, ಮಹಾಂತೇ ಕಟ್ಟಿಮನಿ, ಲತಾ ರಾಜಶೇಖರ, ಹನಮಂತಪ್ಪ, ಗವಿಸಿದ್ದಪ್ಪ, ಬಸವರಾಜ, ಬೀರಪ್ಪ, ಮಂಜುನಾಥ, ಕೂಲಿಕಾರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande