
ಬೆಂಗಳೂರು, 18 ಮೇ (ಹಿ.ಸ.) :
ಆ್ಯಂಕರ್ : ಸವದತ್ತಿ ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಿತು.
ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ “ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ”ದ ಸಭೆಯಲ್ಲಿ ಶಾಸಕ ವಿಶ್ವಾಸ ವೈದ್ಯ ಭಾಗವಹಿಸಿ ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿದರು.
ಸಭೆಯಲ್ಲಿ ದೇವಸ್ಥಾನದ ಮೂಲಸೌಕರ್ಯ ಅಭಿವೃದ್ಧಿ, ಭಕ್ತರಿಗೆ ಅಗತ್ಯ ಸೌಲಭ್ಯಗಳ ವಿಸ್ತರಣೆ, ರಸ್ತೆ ಹಾಗೂ ಸ್ವಚ್ಛತಾ ವ್ಯವಸ್ಥೆ, ಪ್ರವಾಸೋದ್ಯಮ ಉತ್ತೇಜನ ಸೇರಿದಂತೆ ನಾನಾ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ಮುಜರಾಯಿ ಇಲಾಖೆಯ ಉನ್ನತ ಅಧಿಕಾರಿಗಳು, ಪ್ರಾಧಿಕಾರದ ನಿರ್ದೇಶಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸುವ ಕುರಿತು ಅಭಿಪ್ರಾಯ ವಿನಿಮಯ ನಡೆಸಿದರು.
ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ, ಮೂಲಭೂತ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.