ಶಿವಮೊಗ್ಗ ಜಿಲ್ಲೆಯ ಜಡೆ ಗ್ರಾಮದಲ್ಲಿ ₹1 ಕೋಟಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಶಿವಮೊಗ್ಗ, 18 ಮೇ (ಹಿ.ಸ.) : ಆ್ಯಂಕರ್ : ಗ್ರಾಮೀಣ ಭಾಗದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಜಡೆ ಗ್ರಾಮದಲ್ಲಿ ಸುಮಾರು ₹1 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹ
Work


ಶಿವಮೊಗ್ಗ, 18 ಮೇ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಭಾಗದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಜಡೆ ಗ್ರಾಮದಲ್ಲಿ ಸುಮಾರು ₹1 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಿ ಕಾಮಗಾರಿಗಳಿಗೆ ಅಧಿಕೃತ ಚಾಲನೆ ನೀಡಿದರು.

ಈ ಯೋಜನೆಯಡಿ ತವನಂದಿ–ಜಡೆ–ಹೊಸೂರು ಜಿಲ್ಲಾ ಮುಖ್ಯ ರಸ್ತೆಯಿಂದ ಅರೆತಲಗಡ್ಡೆ, ಆಲಳ್ಳಿ, ಬಂಕವಳ್ಳಿ, ಸೂರಣಗಿ, ಕಮರೂರು, ಎಡಗೊಪ್ಪ ಹಾಗೂ ಜಡೆಕೋಟೆ ಮಾರ್ಗವಾಗಿ ಬನವಾಸಿ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸರಪಳಿ 14.21 ಕಿ.ಮೀ ರಿಂದ 15.57 ಕಿ.ಮೀ ವರೆಗೆ ಆಯ್ದ ಭಾಗಗಳಲ್ಲಿ ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದರಿಂದ ಹಲವು ಗ್ರಾಮಗಳ ಜನರಿಗೆ ಸುಗಮ ಸಂಚಾರ ಸೌಲಭ್ಯ ದೊರೆಯಲಿದ್ದು, ಮಳೆಗಾಲದ ವೇಳೆ ಉಂಟಾಗುತ್ತಿದ್ದ ರಸ್ತೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗುವ ನಿರೀಕ್ಷೆಯಿದೆ.

ಇದೇ ವೇಳೆ ಜಡೆಯಿಂದ ಮಂಗಾಪುರ ಮಾರ್ಗವಾಗಿ ಸೂರಣಗಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಗೂ ಚಾಲನೆ ನೀಡಲಾಯಿತು. ಈ ರಸ್ತೆ ಅಭಿವೃದ್ಧಿಯಿಂದ ರೈತರು ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರ ವ್ಯವಸ್ಥೆಯೂ ಸುಧಾರಣೆಯಾಗಲಿದೆ.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಗ್ರಾಮೀಣ ಭಾಗದ ಪ್ರತಿಯೊಂದು ರಸ್ತೆಯೂ ಗುಣಮಟ್ಟದಿಂದ ನಿರ್ಮಾಣವಾಗಬೇಕು ಎಂಬುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಉತ್ತಮ ರಸ್ತೆ ವ್ಯವಸ್ಥೆ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿದ್ದು, ಜನಸಾಮಾನ್ಯರ ಸಾರಿಗೆ ಸಂಪರ್ಕ ಸುಲಭಗೊಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದರು.

ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿಗೆ ಯಾವುದೇ ರೀತಿಯ ರಾಜಿ ಇರಬಾರದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande