ಘಟಪ್ರಭಾ ನದಿಗೆ ಬ್ರಿಜ್ ಕಂ ಬಾಂದಾರ ನಿರ್ಮಾಣಕ್ಕೆ ಚಾಲನೆ
ಬೆಳಗಾವಿ, 18 ಮೇ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ನಾಗನೂರ ಕೆ.ಎಂ (ಮಲ್ಲಟ್ಟಿ) ಹಾಗೂ ಸುತಗಟ್ಟಿ ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದನೆಯಾಗಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬಾಂದಾರ ಕಾಮಗಾರಿಗೆ ಸಚಿವ ಸತೀಶ್ ಜಾರಕಿಹೊಳಿ ಭೂಮಿ ಪೂಜೆ
ಭೂಮಿ ಪೂಜೆ


ಬೆಳಗಾವಿ, 18 ಮೇ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದ ನಾಗನೂರ ಕೆ.ಎಂ (ಮಲ್ಲಟ್ಟಿ) ಹಾಗೂ ಸುತಗಟ್ಟಿ ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದನೆಯಾಗಿ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಬ್ರಿಜ್ ಕಂ ಬಾಂದಾರ ಕಾಮಗಾರಿಗೆ ಸಚಿವ ಸತೀಶ್ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಿದರು.

ರೂ. 7.96 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಮಹತ್ವಾಕಾಂಕ್ಷಿ ಯೋಜನೆ ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ. ಸೇತುವೆ ಹಾಗೂ ಬಾಂದಾರ ನಿರ್ಮಾಣದಿಂದ ನಾಗನೂರ ಕೆ.ಎಂ (ಮಲ್ಲಟ್ಟಿ), ಸುತಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಮಳೆಗಾಲದಲ್ಲಿ ಸಂಪರ್ಕ ಕಡಿತವಾಗುವ ಸಮಸ್ಯೆಗೆ ಈ ಯೋಜನೆಯಿಂದ ಶಾಶ್ವತ ಪರಿಹಾರ ದೊರೆಯಲಿದ್ದು, ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸುಲಭವಾಗಿ ಸಾಗಿಸಲು ಅನುಕೂಲವಾಗಲಿದೆ. ಜೊತೆಗೆ ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಸಹ ಈ ಕಾಮಗಾರಿ ಬಹಳ ಉಪಯುಕ್ತವಾಗಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರ ಅಗತ್ಯಗಳಿಗೆ ಸ್ಪಂದಿಸುವ ಹಲವು ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande