ದೇವೇಗೌಡ ಜನ್ಮದಿನ ; ಪ್ರಧಾನಿ ಮೋದಿ ಶುಭಾಶಯ
ನವದೆಹಲಿ, 18 ಮೇ (ಹಿ.ಸ.) : ಆ್ಯಂಕರ್ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ ಎಚ್.ಡಿ. ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಜ
Pm


ನವದೆಹಲಿ, 18 ಮೇ (ಹಿ.ಸ.) :

ಆ್ಯಂಕರ್ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ ಎಚ್.ಡಿ. ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ಅವರು ಕಳೆದ ದೀರ್ಘ ವರ್ಷಗಳಲ್ಲಿ ರಾಷ್ಟ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದಾರೆ. ನೀತಿ ವಿಷಯಗಳ ಕುರಿತು ಅವರ ಆಳವಾದ ತಿಳುವಳಿಕೆ ಮತ್ತು ಸಮಾಜದ ಅಂಚಿನಲ್ಲಿರುವ ಜನರಿಗೆ ಸೇವೆ ಸಲ್ಲಿಸುವ ಬದ್ಧತೆ ಅವರನ್ನು ವಿಶಿಷ್ಟ ನಾಯಕರನ್ನಾಗಿ ಮಾಡಿದೆ” ಎಂದು ಪ್ರಶಂಸಿಸಿದ್ದಾರೆ.

ಇದೇ ವೇಳೆ, “ಅವರಿಗೆ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande