
ಬೆಂಗಳೂರು, 18 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನ ನಂತರ ಹಲವೆಡೆ ಮೋಡ ಕವಿದ ವಾತಾವರಣ ಉಂಟಾಗುವ ನಿರೀಕ್ಷೆಯಿದೆ.
ರಾಜ್ಯದ ನಾನಾ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.
ವಿಶೇಷವಾಗಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.