ಪ್ರಗತಿಯತ್ತ ಕರ್ನಾಟಕ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ
ತುಮಕೂರು, 18 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮೇ 19ರಂದು ನಡೆಯಲಿರುವ “ಪ್ರಗತಿಯತ್ತ ಕರ್ನಾಟಕ – ಸಾರ್ಥಕ ಸೇವೆಗಳ ಸಮರ್ಪಣೆ” ಕಾರ್ಯಕ್ರಮದ ಸಿದ್ಧತೆಯನ್ನು ಗೃಹ ಸಚಿವ
ಪರಿಶೀಲನೆ


ತುಮಕೂರು, 18 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮೇ 19ರಂದು ನಡೆಯಲಿರುವ “ಪ್ರಗತಿಯತ್ತ ಕರ್ನಾಟಕ – ಸಾರ್ಥಕ ಸೇವೆಗಳ ಸಮರ್ಪಣೆ” ಕಾರ್ಯಕ್ರಮದ ಸಿದ್ಧತೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಮಹತ್ವದ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಕಾರ್ಯಕ್ರಮದ ವೇಳೆ ಇ-ಪೌತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸುಮಾರು 1,52,492 ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕಂದಾಯ ಇಲಾಖೆಯ ಮೂಲಕ ಸುಮಾರು 14 ಲಕ್ಷ ಜನರಿಗೆ ನಾನಾ ಸೌಲಭ್ಯಗಳು ತಲುಪಿರುವುದಾಗಿ ಮಾಹಿತಿ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಸುಮಾರು 682 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡಿಗಲ್ಲು ಹಾಕಿ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಪರಿಶೀಲನೆ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ಷಡಕ್ಷರಿ, ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ, ಕೇಂದ್ರ ವಲಯ ಮುಖ್ಯಸ್ಥ ಗಿರೀಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅಶ್ವಿಜ ಮುಂತಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande