
ಬೆಂಗಳೂರು, 18 ಮೇ (ಹಿ.ಸ.) :
ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಸಂಬಂಧ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳ ಸಭೆ ನಡೆಯಿತು.
ಸಭೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ, ಮತದಾರರ ನೋಂದಣಿ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮತದಾರರ ಪಟ್ಟಿಯ ಶುದ್ಧೀಕರಣ ಕುರಿತಂತೆ ವಿವರವಾದ ಚರ್ಚೆ ನಡೆಸಲಾಯಿತು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಲಿಸಿದ ಅಧಿಕಾರಿಗಳು, ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮತದಾರರ ಪಟ್ಟಿಯ ನಿಖರತೆ ಹಾಗೂ ಅರ್ಹ ಮತದಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಭೆಯಲ್ಲಿ ಒತ್ತು ನೀಡಲಾಯಿತು.
ಸಭೆಯಲ್ಲಿ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಚುನಾವಣಾ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.