ವಿಯೆಟ್ನಾಂ ಹಾಗೂ ದಕ್ಷಿಣ ಕೊರಿಯಾ ಪ್ರವಾಸಕ್ಕೆ ರಾಜನಾಥ್ ಸಿಂಗ್
ನವದೆಹಲಿ, 18 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ವಿಯೆಟ್ನಾಂ ಮತ್ತು ದಕ್ಷಿಣ ಕೊರಿಯಾ ಪ್ರವಾಸ ಕೈಗೊಂಡಿದ್ದು, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಬಲಪಡಿಸುವ ಉದ್ದೇಶದಿಂದ ಮಹತ್ವದ ಮಾತುಕತೆಗಳನ್ನು ನಡೆಸಲಿದ್ದಾರೆ. ಈ ಕುರಿತು ಎಕ್ಸ್ ಸಾಮಾ
ರಾಜನಾಥ ಸಿಂಗ್


ನವದೆಹಲಿ, 18 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ವಿಯೆಟ್ನಾಂ ಮತ್ತು ದಕ್ಷಿಣ ಕೊರಿಯಾ ಪ್ರವಾಸ ಕೈಗೊಂಡಿದ್ದು, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಬಲಪಡಿಸುವ ಉದ್ದೇಶದಿಂದ ಮಹತ್ವದ ಮಾತುಕತೆಗಳನ್ನು ನಡೆಸಲಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿರುವ ಅವರು, “ಇಂದು, ಮೇ 18ರಂದು ನಾನು ಹನೋಯ್ ತಲುಪುತ್ತಿದ್ದೇನೆ. ನಮ್ಮ ಕಾರ್ಯಕ್ರಮಗಳ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು ಈ ವಾರ ವಿಯೆಟ್ನಾಂ ಮತ್ತು ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಾರ್ಯತಂತ್ರದ ಮಿಲಿಟರಿ ಸಹಕಾರವನ್ನು ಮತ್ತಷ್ಟು ಆಳಗೊಳಿಸುವುದು, ರಕ್ಷಣಾ ಕೈಗಾರಿಕಾ ಪಾಲುದಾರಿಕೆಗಳನ್ನು ಬಲಪಡಿಸುವುದು ಹಾಗೂ ಕಡಲ ಸಹಯೋಗವನ್ನು ಹೆಚ್ಚಿಸುವತ್ತ ಈ ಪ್ರವಾಸದಲ್ಲಿ ವಿಶೇಷ ಗಮನ ಹರಿಸಲಾಗುವುದು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande