ಖಾಸಗಿ ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರಕಟಣೆಗೆ ಕ್ರಮ : ಜಿಲ್ಲಾಧಿಕಾರಿ
ಹಾಸನ, 18 ಮೇ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿಗಳನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಿ ವಿಸ್ತೃತವಾಗಿ ವರದಿಯನ್ನು ಒಂದು ತಿಂಗಳೊಳಗೆ ನೀಡುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸ
Dc health meeting


ಹಾಸನ, 18 ಮೇ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ದರ ಪಟ್ಟಿಗಳನ್ನು ಸೂಚನಾ ಫಲಕದಲ್ಲಿ ಅಳವಡಿಸಬೇಕು ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಿ ವಿಸ್ತೃತವಾಗಿ ವರದಿಯನ್ನು ಒಂದು ತಿಂಗಳೊಳಗೆ ನೀಡುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕೆ.ಪಿ.ಎಂ.ಎ ಸಭೆ ನಡೆಸಿ ಮಾತನಾಡಿದ ಅವರು ಆಸ್ಪತ್ರೆಗೆ ಬರುವ ರೋಗಿಗಳಿಗೆ ಕಾಣುವ ರೀತಿಯಲ್ಲಿ ದರಪಟ್ಟಿಯನ್ನು ಹಾಕಬೇಕು ಜೊತೆಗೆ ಕನ್ನಡ ಭಾಷೆಯಲ್ಲಿ ಹಾಕಬೇಕು, ಆರೋಗ್ಯ ವಿಮೆ, ಉಚಿತ ಆರೋಗ್ಯ ಸೇವೆಗಳು, ರಿಯಾಯಿತಿ ಮತ್ತು ವೈದ್ಯಕೀಯ ಬಿಲ್ ಮರು ಪಾವತಿ ಕುರಿತ ಮಾಹಿತಿಯನ್ನು ಕೂಡ ಫಲಕದಲ್ಲಿ ಅಳವಡಿಸಬೇಕು ಜೊತೆಗೆ ಆರೋಗ್ಯ ಸೇವೆಗಳ ನ್ಯೂನತೆಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಲು ದೂರವಾಣಿ ಸಂಖ್ಯೆ ಅಳವಡಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರೊಂದಿಗೆ ಸ್ಪಂದಿಸಿ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವುದರ ಜೊತೆಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಕೆ.ಪಿ.ಎಂ.ಎ ನಿಯಾಮಾವಳಿ ಬಗ್ಗೆ ಮತ್ತಿತರ ವಿಷಯಗಳ ಕುರಿತು ತಿಳುವಳಿಕೆ ನೀಡಲು ಕಾರ್ಯಾಗಾರ ಏರ್ಪಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದರು.

ಹೃದಯಕ್ಕೆ ಸಂಬಂಧಿಸಿದ ರೋಗಗಳಿಗೆ ಜಿಲ್ಲೆಯಲ್ಲಿ ಯಾವ ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯುತ್ತದೆ ಎಂಬುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕರಿಂದ ಪ್ರತಿ ತಿಂಗಳು ಖಾಸಗಿ ಆಸ್ಪತ್ರೆಗಳ ಬಗ್ಗೆ ಬಂದಿರುವ ದೂರುಗಳನ್ನು ಪಟ್ಟಿ ಮಾಡಿ ಪ್ರತಿ ತಿಂಗಳು ಸಭೆ ನಡೆಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಅಪಘಾತಗಳು ಸಂಭವಿಸಿದ ಸಂದರ್ಭದಲ್ಲಿ ಜೀವ ರಕ್ಷಣೆಗೆ ಇರುವ ಗೋಲ್ಡನ್ ಅವರ್ ನಲ್ಲಿ ಆಸ್ಪತ್ರೆಗೆ ಗಾಯಾಳು ಗಳನ್ನು ಕರೆತಂದು ಚಿಕಿತ್ಸೆ ದೊರಕಿಸಲು ನೆರವಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಪ್ರಸೂತಿ ತಜ್ನರಾದ ಡಾ.ಭಾರತಿ ರಾಜಶೇಖರ್, ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande