
ಬೆಂಗಳೂರು, 18 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ ಹಾಗೂ ಬಮೂಲ್ ಟ್ರಸ್ಟ್ ವತಿಯಿಂದ ರಾಜಾನುಕುಂಟೆಯಲ್ಲಿರುವ ಬೆಂಗಳೂರು ಉತ್ತರ ಶಿಬಿರ ಕಚೇರಿ ಆವರಣದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಹಾಗೂ ಸಿಬ್ಬಂದಿಯವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರದ ಡಿಡಿ ವಿತರಣಾ ಸಮಾರಂಭ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಉತ್ತಮ ಅಂಕಗಳನ್ನು ಪಡೆದು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳಿಗೆ ಡಿಡಿ ವಿತರಿಸಿ ಅಭಿನಂದಿಸಿದರು. ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಿ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದ್ದು, ಇಂತಹ ಕಾರ್ಯಕ್ರಮಗಳು ಗ್ರಾಮೀಣ ಹಾಗೂ ಹಾಲು ಉತ್ಪಾದಕರ ಕುಟುಂಬಗಳ ಮಕ್ಕಳಿಗೆ ಉತ್ತೇಜನ ನೀಡಲಿವೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.