
ಧಾರವಾಡ, 18 ಮೇ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಇಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸ್ಥಳೀಯ ಹಾಗೂ ಆಂತರಿಕ ದೂರು ನಿರ್ವಹಣಾ ಸಮಿತಿಗಳ ಅಧ್ಯಕ್ಷರಿಗಾಗಿ ವಿಶೇಷ ಕಾರ್ಯಾಗಾರ ಆಯೋಜಿಸಲಾಯಿತು.
“ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿರ್ವಹಿಸುವಿಕೆ) ಕಾಯ್ದೆ-2013” ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಈ ಕಾರ್ಯಾಗಾರವನ್ನು ಡಾ. ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಿಳೆಯರ ಸುರಕ್ಷತೆ, ಕೆಲಸದ ಸ್ಥಳದಲ್ಲಿ ಗೌರವಯುತ ವಾತಾವರಣ ನಿರ್ಮಾಣ ಹಾಗೂ ದೂರುಗಳ ಸಮರ್ಪಕ ನಿರ್ವಹಣೆಯ ಮಹತ್ವವನ್ನು ವಿವರಿಸಲಾಯಿತು. ಕಾಯ್ದೆಯ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ವತಿಯಿಂದ ನಾನಾ ಇಲಾಖೆಗಳ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರದ ಪೊಲೀಸ್ ಆಯುಕ್ತರು, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಹಾಗೂ ನಾನಾ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.