ಅಕ್ರಮ ನುಸುಳುಕೋರರ ವಿರುದ್ದ ಕಠಿಣ ಕ್ರಮಕ್ಕೆ ಅಶೋಕ ಅಣವೇಕರ ಆಗ್ರಹ
ಹುಬ್ಬಳ್ಳಿ, 18 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ಅಕ್ರಮ ನುಸುಳುಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆ, ಅಲ್ಲಿನ ಪರಿಸ್ಥಿತಿಯಿಂದ ಭಯಗೊಂಡು ರೋಹಿಂಗ್ಯಾ ಮುಸ್ಲಿಮರು ಹಾಗೂ ಬಾಂಗ್ಲಾದೇಶ ಮೂಲದ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕದತ್ತ ಬರುತ್ತಿದ್ದಾರ
ಅಶೋಕ ಅಣವೇಕರ


ಹುಬ್ಬಳ್ಳಿ, 18 ಮೇ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದಲ್ಲಿ ಅಕ್ರಮ ನುಸುಳುಕೋರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆ, ಅಲ್ಲಿನ ಪರಿಸ್ಥಿತಿಯಿಂದ ಭಯಗೊಂಡು ರೋಹಿಂಗ್ಯಾ ಮುಸ್ಲಿಮರು ಹಾಗೂ ಬಾಂಗ್ಲಾದೇಶ ಮೂಲದ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕದತ್ತ ಬರುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಅಶೋಕ ಅಣವೇಕರ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ರೈಲ್ವೆ ಮಾರ್ಗದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಹುಬ್ಬಳ್ಳಿಗೆ ಆಗಮಿಸುತ್ತಿರುವುದು ಕಂಡುಬಂದಿದೆ. ಕೆಲ ಸ್ಥಳೀಯರು ಅವರಿಗೆ ಆಶ್ರಯ ನೀಡುತ್ತಿರುವುದು ದೇಶದ ಆಂತರಿಕ ಭದ್ರತೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಇಲಾಖೆ ಹಾಗೂ ರೈಲ್ವೆ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ನಿಗಾವಹಿಸಿ, ಅಕ್ರಮ ನುಸುಳುಕೋರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande