ಥಳಿ ಕ್ಷೇತ್ರ ಬಿಜೆಪಿ ಗೆಲುವಿನ ಭದ್ರ ಅಡಿಪಾಯ : ಆರ್. ಅಶೋಕ
ಹೊಸೂರ, 19 ಮೇ (ಹಿ.ಸ.) : ಆ್ಯಂಕರ್ : ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ತಮಿಳುನಾಡಿನ ಹೊಸೂರಿನಲ್ಲಿರುವ ಚಂದ್ರಚೂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಕೃಷ್ಣಗಿರಿ ಜಿಲ್ಲೆ ಹಾಗೂ ಥಳಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಧನ್ಯವಾದ ಸಮಾರಂಭದಲ್ಲಿ ಭಾಗ
Ashok


ಹೊಸೂರ, 19 ಮೇ (ಹಿ.ಸ.) :

ಆ್ಯಂಕರ್ : ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ತಮಿಳುನಾಡಿನ ಹೊಸೂರಿನಲ್ಲಿರುವ ಚಂದ್ರಚೂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಕೃಷ್ಣಗಿರಿ ಜಿಲ್ಲೆ ಹಾಗೂ ಥಳಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಧನ್ಯವಾದ ಸಮಾರಂಭದಲ್ಲಿ ಭಾಗವಹಿಸಿ ಸ್ಥಳೀಯ ನಾಯಕರು ಮತ್ತು ನಿಸ್ವಾರ್ಥ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಡಾ. ನಾಗೇಶ್ ಕುಮಾರ್ ಕೇವಲ 5,240 ಮತಗಳ ಅಂತರದಿಂದ ಸೋಲು ಕಂಡಿದ್ದರೂ, ಥಳಿ ಕ್ಷೇತ್ರದ ಜನತೆ ನೀಡಿದ ಅಪಾರ ಬೆಂಬಲ ಪಕ್ಷಕ್ಕೆ ಹೊಸ ಉತ್ಸಾಹ ತುಂಬಿದೆ ಎಂದು ಹೇಳಿದರು.

ತಮಿಳು ನಾಡಿನಲ್ಲಿ ಬಿಜೆಪಿ ದಿನದಿಂದ ದಿನಕ್ಕೆ ಬಲಿಷ್ಠವಾಗಿ ಬೆಳೆಯುತ್ತಿರುವುದಕ್ಕೆ ಈ ಫಲಿತಾಂಶವೇ ಸ್ಪಷ್ಟ ಉದಾಹರಣೆ ಎಂದು ಅಭಿಪ್ರಾಯಪಟ್ಟ ಅವರು, ಗೆಲುವು-ಸೋಲುಗಳು ಪ್ರಜಾಪ್ರಭುತ್ವದ ಸಹಜ ಪ್ರಕ್ರಿಯೆಯಾದರೂ ಜನತೆ ತೋರಿದ ವಿಶ್ವಾಸ ಪಕ್ಷದ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಹೇಳಿದರು.

ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ಆರ್. ಅಶೋಕ ಅವರು, ನಿರಾಶೆಯಾಗದೆ ಇನ್ನಷ್ಟು ಸಂಘಟಿತವಾಗಿ ಜನರ ಮಧ್ಯೆ ಕೆಲಸ ಮಾಡುವಂತೆ ಕರೆ ನೀಡಿದರು. ಮುಂದಿನ ದಿನಗಳಲ್ಲಿ ಥಳಿ ಕ್ಷೇತ್ರದಲ್ಲಿ ಬಿಜೆಪಿ ವಿಜಯದ ಹೊಸ ಇತಿಹಾಸ ನಿರ್ಮಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜನರ ಆಶೀರ್ವಾದ ಮತ್ತು ಕಾರ್ಯಕರ್ತರ ಪರಿಶ್ರಮದ ಬಲದಿಂದ ತಮಿಳುನಾಡಿನಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿದೆ ಎಂಬ ನಂಬಿಕೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande