ರೈತರಿಗಾಗಿ ಅರ್ಜಿ ಆಹ್ವಾನ
ಗದಗ, 19 ಮೇ (ಹಿ.ಸ.) : ಆ್ಯಂಕರ್ : ದ್ವಿದಳಧಾನ್ಯಗಳಲ್ಲಿ ಮೌಲ್ಯವರ್ಧನೆ ಉತ್ತೇಜಿಸಲು ಹಾಗೂ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ, ಗದಗ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ದ್ವಿದಳಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೋನೆಯ ದಿನವಾಗಿದ
ಫೋಟೋ


ಗದಗ, 19 ಮೇ (ಹಿ.ಸ.) :

ಆ್ಯಂಕರ್ : ದ್ವಿದಳಧಾನ್ಯಗಳಲ್ಲಿ ಮೌಲ್ಯವರ್ಧನೆ ಉತ್ತೇಜಿಸಲು ಹಾಗೂ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ, ಗದಗ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ದ್ವಿದಳಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೋನೆಯ ದಿನವಾಗಿದೆ.

ಆಸಕ್ತ ರೈತರು, ರೈತ ಉತ್ಪಾದಕ ಸಂಸ್ಥೆಗಳು, ಪ್ರಾಥಮಿಕ ಕೃಷಿ ಷತ್ತಿನ ಸಂಘಗಳು, ನೋಂದಾಯಿತ ಸಂಸ್ಥೆಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕೇಂದ್ರ ಮತ್ತು ರಾಜ್ಯದ ಪಾಲಿನ ಶೇ. 60:40 ಅನುಪಾತದಲ್ಲಿ, ಯೋಜನಾ ವೆಚ್ಚದ ಶೇ. 33 (ಗರಿಷ್ಠ ರೂ. 25 ಲಕ್ಷ) ರಷ್ಟು ಸಹಾಯಧನ ನೀಡಲು ಅವಕಾವಿರುತ್ತದೆ. ಸದರಿ ಯೋಜನೆಯಡಿ ಬ್ಯಾಂಕ್ ಸಾಲ ಪಡೆಯುವದು ಕಡ್ಡಾಯವಾಗಿದ್ದು, ಯೋಜನಾ ವೆಚ್ಚದ ಶೇ. 15 ರಷ್ಟು ಸ್ವಂತ ಬಂಡವಾಳ ಹೂಡುವ ಸಾಮರ್ಥ್ಯವಿರಬೇಕು. ಆಸಕ್ತ ಫಲಾನುಭವಿಗಳು ಜೂನ್ 15 ರೊಳಗಾಗಿ ಸಂಬಂಧಿಸಿದ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande