250 ಶ್ರಮಿಕರಿಗೆ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ
ಗದಗ, 19 ಮೇ (ಹಿ.ಸ.) : ಆ್ಯಂಕರ್ : ಅಸಂಘಟಿತ ವಲಯದ ಶ್ರಮಿಕರ ಸಾಮಾಜಿಕ ಭದ್ರತೆ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಗದಗ ಜಿಲ್ಲಾ ಸವಿತಾ ಸಮಾಜ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ ಎಂದು ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕೃಷ್ಣಗೌಡ್ರು ಪಾಟೀಲ ಹೇಳಿದರು. ಗದಗ ನಗರದ ಕಾಟ
ಫೋಟೋ


ಗದಗ, 19 ಮೇ (ಹಿ.ಸ.) :

ಆ್ಯಂಕರ್ : ಅಸಂಘಟಿತ ವಲಯದ ಶ್ರಮಿಕರ ಸಾಮಾಜಿಕ ಭದ್ರತೆ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಗದಗ ಜಿಲ್ಲಾ ಸವಿತಾ ಸಮಾಜ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಇಡೀ ರಾಜ್ಯಕ್ಕೆ ಮಾದರಿಯಾಗಿವೆ ಎಂದು ಕಾಂಗ್ರೆಸ್ ಯುವ ಘಟಕದ ಜಿಲ್ಲಾಧ್ಯಕ್ಷ ಕೃಷ್ಣಗೌಡ್ರು ಪಾಟೀಲ ಹೇಳಿದರು.

ಗದಗ ನಗರದ ಕಾಟನ್ ಸೆಲ್ ಸೊಸೈಟಿಯಲ್ಲಿರುವ ತಮ್ಮ ಕಾರ್ಯಾಲಯದಲ್ಲಿ ಗದಗ ಜಿಲ್ಲಾ ಸವಿತಾ ಸಮಾಜ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗದಗ–ಬೆಟಗೇರಿ ಅವಳಿ ನಗರದ 250 ಅರ್ಹ ಫಲಾನುಭವಿಗಳಿಗೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಸ್ಮಾರ್ಟ್ ಗುರುತಿನ ಚೀಟಿಗಳನ್ನು ವಿತರಿಸಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ಶ್ರಮಿಕನಿಗೂ ಸರ್ಕಾರದ ಸವಲತ್ತುಗಳು ತಲುಪಿದಾಗ ಮಾತ್ರ ಪ್ರಜಾಪ್ರಭುತ್ವದ ಆಶಯಗಳು ಸಾಕಾರವಾಗುತ್ತವೆ. ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸಾಮಾಜಿಕ ಭದ್ರತೆ ಒದಗಿಸುತ್ತಿರುವ ಗದಗ ಜಿಲ್ಲಾ ಸವಿತಾ ಸಮಾಜದ ಕಾರ್ಯ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ವಿಚಾರವಂತ ಎಸ್.ಎನ್. ಬಳ್ಳಾರಿ ಮಾತನಾಡಿ, ಶೋಷಿತ ಹಾಗೂ ಶ್ರಮಿಕ ವರ್ಗದ ಜನರಿಗೆ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ತಲುಪಿಸುವ ಇಂತಹ ಕಾರ್ಯಕ್ರಮಗಳು ಇಂದಿನ ಅಗತ್ಯವಾಗಿದೆ. 250 ಕುಟುಂಬಗಳಿಗೆ ಸಾಮಾಜಿಕ ಭದ್ರತೆಯ ರಕ್ಷಣಾ ಕವಚ ಒದಗಿಸಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದರು.

ಕಾಂಗ್ರೆಸ್ ಯುವ ನಾಯಕ ರವಿಕುಮಾರ ರೆಡ್ಡಿ ಮಾತನಾಡಿ, ಕಷ್ಟಪಟ್ಟು ದುಡಿಯುವ ಶ್ರಮಿಕ ವರ್ಗಕ್ಕೆ ಸಾಮಾಜಿಕ ಭದ್ರತೆ ಒದಗಿಸುವ ಕಾರ್ಯದಲ್ಲಿ ಗದಗ ಜಿಲ್ಲಾ ಸವಿತಾ ಸಮಾಜ ಇಡೀ ರಾಜ್ಯದಲ್ಲೇ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿ ಸಿದ್ದಿ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರ ಗುರುತಿನ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಆರೋಗ್ಯ ವಿಮೆ, ಅಪಘಾತ ಪರಿಹಾರ, ಹೆರಿಗೆ ಭತ್ಯೆ, ಮಕ್ಕಳ ಶಿಕ್ಷಣ ಸಹಾಯಧನ ಹಾಗೂ ಪಿಂಚಣಿ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಾ ಎಚ್. ಹಡಪದ ಮಾತನಾಡಿ, ಸಮಾಜದ ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕನಿಗೂ ಸರ್ಕಾರದ ಸೌಲಭ್ಯ ತಲುಪಿಸುವುದೇ ಸಂಘಟನೆಯ ಮುಖ್ಯ ಧ್ಯೇಯವಾಗಿದೆ. ವಿತರಿಸಲಾದ ಗುರುತಿನ ಚೀಟಿಗಳು ಬಡ ಕುಟುಂಬಗಳ ಬದುಕಿನ ರಕ್ಷಾಕವಚವಾಗಲಿವೆ ಎಂದು ಹೇಳಿದರು.

ಗದಗ ಸವಿತಾ ಸಮಾಜ ಸುಧಾರಣಾ ಸಂಘದ ಅಧ್ಯಕ್ಷ ಪರಶುರಾಮ ಕೋಟೆಕಲ್ಲ ಸ್ವಾಗತಿಸಿದರು. ವಿಕಾಸ ಕ್ಷೀರಸಾಗರ ನಿರೂಪಿಸಿದರು. ಮಂಜುನಾಥ ಮಾನೆ ಹಾಗೂ ಅರುಣ ರಾಂಪೂರ ವಂದಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಪದಾಧಿಕಾರಿಗಳು, ಹಿರಿಯರು, ಯುವಕರು ಹಾಗೂ ನೂರಾರು ಫಲಾನುಭವಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande