ಹೆಚ್.ಡಿ.ಕೋಟೆಯಲ್ಲಿ ನಶಾಮುಕ್ತ ಭಾರತ ಜಾಗೃತಿ ಅಭಿಯಾನ
ಮೈಸೂರು, 19 ಮೇ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ವತಿಯಿಂದ ಸೇಂಟ್ ಮೇರಿಸ್ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ “ನಶಾಮುಕ್ತ ಭಾರತ ಅಭಿಯಾನ” ಕಾರ್ಯಕ್ರಮವನ್ನು ಆಯೋಜಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಪಥಸಂಚಲನ ನಡೆಸಲಾಯಿತು. ಮಾದಕ ವಸ್ತುಗಳ ದುಷ್ಪರಿಣಾ
Awareness


ಮೈಸೂರು, 19 ಮೇ (ಹಿ.ಸ.) :

ಆ್ಯಂಕರ್ : ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪೊಲೀಸ್ ಠಾಣೆ ವತಿಯಿಂದ ಸೇಂಟ್ ಮೇರಿಸ್ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ “ನಶಾಮುಕ್ತ ಭಾರತ ಅಭಿಯಾನ” ಕಾರ್ಯಕ್ರಮವನ್ನು ಆಯೋಜಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಪಥಸಂಚಲನ ನಡೆಸಲಾಯಿತು.

ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಪಥಸಂಚಲನದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದರು.

ಪಥಸಂಚಲನದ ವೇಳೆ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಆರೋಗ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಸಂದೇಶಗಳನ್ನು ಸಾರಲಾಯಿತು. ಯುವಜನರು ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande