
ಬೆಂಗಳೂರು, 19 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಸಾರಿಗೆ ಸಂಘಟನೆಗಳು ಮೇ 20 ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಇದರಿಂದ ನಾಳೆ ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ಸೇವೆ ಸ್ಥಗಿತಗೊಳ್ಳುವ ಆತಂಕ ದೂರವಾಗಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಷ್ಕರ ನಡೆಸಬಾರದೆಂದು ಸೂಚನೆ ನೀಡಿದೆ. ಜೊತೆಗೆ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವೆ ತಕ್ಷಣ ಮಾತುಕತೆ ನಡೆಸುವಂತೆ ಸೂಚಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ.
ಸರ್ಕಾರ ಈಗಾಗಲೇ 12.5% ವೇತನ ಹೆಚ್ಚಳ ಘೋಷಿಸಿರುವುದನ್ನು ಉಲ್ಲೇಖಿಸಿ, “ಇಂತಹ ಸಂದರ್ಭದಲ್ಲಿ ಮುಷ್ಕರಕ್ಕೆ ಮುಂದಾಗುವುದು ಸೂಕ್ತವಲ್ಲ” ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ. ಜೊತೆಗೆ, ಸಮಸ್ಯೆ ಬಗೆಹರಿಸಲು ಸರ್ಕಾರ ಹಾಗೂ ನೌಕರರ ಸಂಘಟನೆಗಳು ಮಾತುಕತೆ ನಡೆಸಬೇಕು ಎಂದು ನಿರ್ದೇಶಿಸಿದೆ.
ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿಗೊಳಿಸಲಾಗಿದ್ದು, ಸಾರಿಗೆ ನೌಕರರ ಜೊತೆ ತುರ್ತು ಸಭೆ ನಡೆಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.