ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು : ಸಿದ್ದರಾಮಯ್ಯ
ತುಮಕೂರು, 19 ಮೇ (ಹಿ.ಸ.) : ಆ್ಯಂಕರ್ : 35 ವರ್ಷಗಳಿಂದ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಅಭಿವೃದ್ಧಿಯೇ ಆಗಿಲ್ಲ. ಮೊನ್ನೆಯಷ್ಟೆ ಕೇವಲ 2,500 ರೂ ಮನೆ ಬಾಡಿಗೆ ಕಟ್ಟಲಾಗದ ಕಾರಣಕ್ಕೆ ಬಾಡಿಗೆಗಿದ್ದ ಬಡ ಕುಟುಂಬದ 13 ವರ್ಷದ ಮಗಳ ಮೇಲೆ ಮನೆ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್ ನ
Cm


ತುಮಕೂರು, 19 ಮೇ (ಹಿ.ಸ.) :

ಆ್ಯಂಕರ್ : 35 ವರ್ಷಗಳಿಂದ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಇಲ್ಲಿ ಅಭಿವೃದ್ಧಿಯೇ ಆಗಿಲ್ಲ. ಮೊನ್ನೆಯಷ್ಟೆ ಕೇವಲ 2,500 ರೂ ಮನೆ ಬಾಡಿಗೆ ಕಟ್ಟಲಾಗದ ಕಾರಣಕ್ಕೆ ಬಾಡಿಗೆಗಿದ್ದ ಬಡ ಕುಟುಂಬದ 13 ವರ್ಷದ ಮಗಳ ಮೇಲೆ ಮನೆ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದು ನಿಜವಾದ ಗುಜರಾತ್ ಮಾದರಿ. ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು,

ಮೋದಿಯವರು ಪ್ರಧಾನಿ ಆಗುವ ಮೊದಲು ದೇಶದಲ್ಲಿ ಡೀಸೆಲ್, ಪೆಟ್ರೋಲ್, ಚಿನ್ನದ ಬೆಲೆ ಎಷ್ಟಿತ್ತು. ಈಗ ಅದು ಆಕಾಶಕ್ಕೆ ಏರಿದೆ. ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ. ಮೋದಿ ದರ್ಬಾರಿನಲ್ಲಿ ಅಂಬಾನಿ ಮತ್ತು ಅದಾನಿ ಮಾತ್ರ ಲಾಭ ಮಾಡಿಕೊಂಡು ಈಗ ಇವರ ಆಸ್ತಿ 8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಮತ್ತು ಬದುಕು ನೆಲಕಚ್ಚಿದ ಎಂದರು.

ಮೋದಿ ಮೋದಿ ಎಂದು ಕುಣಿಯುತ್ತಿದ್ದ ಭಾರತದ ಬಡ ಜನರು ಮತ್ತು ಮಧ್ಯಮ ವರ್ಗದವರಿಗೆ ಭ್ರಮನಿರಸನವಾಗಿದೆ ಎಂದರು.

ನಾವು ನುಡಿದಂತೆ ನಡೆದಿದ್ದೇವೆ. ತಲಾ ಆದಾಯದಲ್ಲಿ ಕನ್ನಡಿಗರು ಇಡೀ ದೇಶದಲ್ಲೇ ನಂಬರ್ ಒನ್ ಇದ್ದಾರೆ. ಇಡೀ ದೇಶದ GST ಗೆ ನಮ್ಮ ಕೊಡುಗೆ ಅಪಾರ ಇದೆ. ದೇಶದ ತಲಾ ಆದಾಯಕ್ಕಿಂತ ರಾಜ್ಯದ ಆದಾಯ ಹೆಚ್ಚಾಗಿರುವ ರೀತಿಯಲ್ಲಿ ನಾವು ಪ್ರಗತಿ ಸಾಧಿಸಿದ್ದೇವೆ. ನಾವು ನುಡಿದಂತೆ ನಡೆದು ಸಾಬೀತುಪಡಿಸಿರುವುದರಿಂದ ಮತ್ತೆ 2028ರ ವಿಧಾನ ಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯದ ನಾಡನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸುತ್ತೇವೆ. ಸಂವಿಧಾನಬದ್ದ ಅಭಿವೃದ್ಧಿ ಮಾರ್ಗದಲ್ಲಿ ನಾಡನ್ನು ಮುನ್ನಡೆಸುತ್ತೇವೆ ಎಂದು ಭರವಸೆ ನೀಡಿದರು.

ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರ ಕಾರಣ. ರಾಜ್ಯದ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್ ನಲ್ಲಿ ಅದ್ವಾನ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಮೋದಿಯ ಅಚ್ಚೇ ದಿನ ಬರಲಿಲ್ಲ. ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯದ ಮೋದಿ ಸರ್ಕಾರ, ರೈತರ ಆದಾಯವನ್ನೂ ದುಪ್ಪಟ್ಟು ಮಾಡಲಿಲ್ಲ. ಕಪ್ಪು ಹಣ ತರಲಿಲ್ಲ. ಹೀಗಾಗಿ ಬಿಜೆಪಿ-ಆರ್ ಎಸ್ ಎಸ್ ಸರ್ಕಾರ ಸಂಪೂರ್ಣ ವಿಫಲವಾಗಿ ದೇಶದ ಸಾಲವನ್ನು 220 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ನೆಮ್ಮದಿನ ನಾಡು ಕಟ್ಟುವ ಸರ್ಕಾರ ಕೊಟ್ಟಿದ್ದೇವೆ. ಮೋದಿ ದೇಶದ ನೆಮ್ಮದಿ ಕಸಿಯುವ ಸರ್ಕಾರ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande