
ಸಂಡೂರು, 19 ಮೇ (ಹಿ.ಸ.) :
ಆ್ಯಂಕರ್ : ವಿಠಲಾಪುರ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 21 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿಠಲಾಪುರ, ಅಂತಾಪುರ, ಮೆಟ್ರಿಕ್, ರಾಜಪುರ, ಸುಲ್ತಾನ್ಪುರ ಗ್ರಾಮಗಳ ಎನ್ಜೆವೈ ಮತ್ತು ಐಪಿಸೆಟ್ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂನ ಸಂಡೂರು ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಕೆ.ಎ ಉಮೇಶ್ ಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್