ಬಕ್ರೀದ್ ಹಬ್ಬ ಹಿನ್ನೆಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಹುಬ್ಬಳ್ಳಿ, 19 ಮೇ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬದ ಪ್ರಯುಕ್ತ ನವಲಗುಂದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಶಾಂತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಸಾರ್ವಜನಿಕರು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತ
Meeting


ಹುಬ್ಬಳ್ಳಿ, 19 ಮೇ (ಹಿ.ಸ.) :

ಆ್ಯಂಕರ್ : ಬಕ್ರೀದ್ ಹಬ್ಬದ ಪ್ರಯುಕ್ತ ನವಲಗುಂದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಶಾಂತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಸಾರ್ವಜನಿಕರು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಮನವಿ ಮಾಡಲಾಯಿತು.

ಸಭೆಯಲ್ಲಿ ನವಲಗುಂದ ಪೊಲೀಸ್ ಠಾಣೆ ಪಿಐ ಹಾಗೂ ಪಿಎಸ್ಐ ಅಧಿಕಾರಿಗಳು, ಪುರಸಭೆಯ ಮುಖ್ಯಾಧಿಕಾರಿಗಳು, ಪಶು ವೈದ್ಯಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿ, ಅಂಜುಮನ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎರಡು ಸಮುದಾಯಗಳ ಹಿರಿಯರು ಭಾಗವಹಿಸಿದ್ದರು.

ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande