
ಚಿತ್ರದುರ್ಗ, 19 ಮೇ (ಹಿ.ಸ.) :
ಆ್ಯಂಕರ್ : ಸಂಸದ ಗೋವಿಂದ ಕಾರಜೋಳ ಅವರು ಚಿತ್ರದುರ್ಗದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ವಿವಿಧ ಸಮಸ್ಯೆಗಳ ಕುರಿತು ಮನವಿಗಳನ್ನು ಸ್ವೀಕರಿಸಿದರು.
ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳು ಹಾಗೂ ಬೇಡಿಕೆಗಳ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದ್ದು, ಸಾರ್ವಜನಿಕ ಸೇವೆಗೆ ಸದಾ ಬದ್ಧರಾಗಿದ್ದೇವೆ ಎಂದು ಹೇಳಿದರು.
ಜನರ ಸಮಸ್ಯೆಗಳನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ ಶೀಘ್ರ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.