ಮಹಿಳೆಯರ ಸ್ವಾವಲಂಬನೆಗೆ ಸಂಜೀವಿನಿ ಸಂತೆಮೇಳಗಳು ಸಹಕಾರಿ : ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ, 19 ಮೇ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಸಂಜೀವಿನಿ ಮಾಸಿಕ ಸಂತೆಮೇಳ, ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು
DVG mp


ದಾವಣಗೆರೆ, 19 ಮೇ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕು ಪಂಚಾಯಿತಿ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಸಂಜೀವಿನಿ ಮಾಸಿಕ ಸಂತೆಮೇಳ, ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ತಯಾರಿಸಿದ ವಿವಿಧ ಉತ್ಪನ್ನಗಳನ್ನು ವೀಕ್ಷಿಸಿ, ಅವರ ಕೈಚಳಕ ಮತ್ತು ಉದ್ಯಮಶೀಲತೆಯನ್ನು ಪ್ರಶಂಸಿಸಿದರು.

ಮಹಿಳೆಯರ ಸ್ವಾವಲಂಬನೆ ಹಾಗೂ ಆರ್ಥಿಕ ಸಬಲೀಕರಣಕ್ಕೆ ಇಂತಹ ಸಂತೆಮೇಳಗಳು ಮಹತ್ವದ ವೇದಿಕೆಯಾಗಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಮಾರುಕಟ್ಟೆಗೆ ಪರಿಚಯಿಸುವ ಅವಕಾಶ ಕಲ್ಪಿಸುತ್ತಿವೆ ಎಂದು ಹೇಳಿದರು.

ಗ್ರಾಮೀಣ ಆರ್ಥಿಕಾಭಿವೃದ್ಧಿಗೆ ಮಹಿಳಾ ಸ್ವಸಹಾಯ ಸಂಘಗಳ ಕೊಡುಗೆ ಮಹತ್ತರವಾಗಿದ್ದು, ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದು ಮಹಿಳೆಯರು ಇನ್ನಷ್ಟು ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿದರು.

ಸಂಜೀವಿನಿ ಸಂತೆಮೇಳಗಳ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ದೊರೆಯುತ್ತಿದ್ದು, ಮಹಿಳೆಯರ ಆತ್ಮವಿಶ್ವಾಸ ಮತ್ತು ಉದ್ಯಮಶೀಲತೆ ಹೆಚ್ಚಲು ಸಹಕಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande