ರಾಷ್ಟ ಮಟ್ಟದ ವಿಶೇಷ ಲೋಕ್ ಅದಾಲತ್
ರಾಷ್ಟ ಮಟ್ಟದ ವಿಶೇಷ ಲೋಕ್ ಅದಾಲತ್
ರಾಷ್ಟ ಮಟ್ಟದ ವಿಶೇಷ ಲೋಕ್ ಅದಾಲತ್


ಕೋಲಾರ, ಮೇ ೧೯ (ಹಿ.ಸ) :

ಆ್ಯಂಕರ್ : ಭಾರತಿಯ ಸವೋಚ್ಚ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಸ್ಥಳೀಯ ಮಟ್ಟದಲ್ಲೇ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ಆಗಸ್ಟ್ ೨೧, ೨೨ ಮತ್ತು ೨೩ ರಂದು ರಾಷ್ಟ ಮಟ್ಟದ ವಿಶೇಷ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ತಿಳಿಸಿದರು.

ನಗರದಲ್ಲಿ ಪತ್ರಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿರುವ ಕರ್ನಾಟಕ ರಾಜ್ಯದ ಒಟ್ಟು ೪೩೨೮ ಪ್ರಕರಣಗಳನ್ನು ಈ ಅದಾಲತ್ಗಾಗಿ ಗುರುತಿಸಲಾಗಿದ್ದು, ಈ ಪೈಕಿ ಕೋಲಾರ ಜಿಲ್ಲೆಯ ೪೩ ಪ್ರಕರಣಗಳನ್ನು ಗುರುತಿಸಲಾಗಿದೆ.

ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ ಪ್ರಕರಣಗಳಿಗಾಗಿ ಪಕ್ಷಗಾರರು ದೆಹಲಿಗೆ ತೆರಳಬೇಕಾಗುತ್ತದೆ. ಇದರಿಂದ ಸಮಯ ಮತ್ತು ಹಣದ ವ್ಯಯವಾಗುತ್ತದೆ. ಇದನ್ನು ಮನಗೊಂಡು, ಸ್ಥಳೀಯ ನ್ಯಾಯಾಲಯಗಳಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಪೂರ್ವ ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಪಕ್ಷಗಾರರು ದೆಹಲಿಗೆ ಹೋಗದೆ ತಮ್ಮ ಜಿಲ್ಲೆ ಅಥವಾ ತಾಲ್ಲೂಕು ಕೇಂದ್ರದ ನ್ಯಾಯಾಲಯದ ಮೂಲಕವೇ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.

ವಿಶೇಷ ಲೋಕ್ ಅದಾಲತ್ನಲ್ಲಿ ಪಾಲ್ಗೊಳ್ಳುವಂತೆ ಸಂಬ0ಧಪಟ್ಟ ಪಕ್ಷಗಾರರ ವಿಳಾಸ ಪತ್ತೆ ಹಚ್ಚಿ ಅವರಿಗೆ ಮಾಹಿತಿ ತಲುಪಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಕೆ.ಜಿ.ಎಫ್, ಬಂಗಾರಪೇಟೆ, ಮಾಲೂರು, ಮುಳಬಾಗಿಲು ಮತ್ತು ಶ್ರೀನಿವಾಸಪುರದಲ್ಲಿ ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಟೇಶ್ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande